21.2 C
Bengaluru
Friday, November 8, 2024

ಇತಿಹಾಸ ಪ್ರಸಿದ್ಧ ಮಳ್ಳೂರಾಂಭ ದೇವಿಯ ರಥೋತ್ಸವ

- Advertisement -
- Advertisement -

Devaramallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಗುರುವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು (Mallurambha Devi Rathotsava) ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು. ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು. ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಜನಾಕರ್ಷಕವಾಗಿದ್ದವು.

ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ವಿ.ಮುನಿಯಪ್ಪ, ಗ್ರೇಡ್ ೨ ತಹಸೀಲ್ದಾರ್ ಶ್ರೀನುವಾಸಲುನಾಯ್ಡು, ರಾಜಸ್ವ ನಿರೀಕ್ಷಕ ಪ್ರಶಾಂತ್, ಗ್ರಾಮ ಲೆಕ್ಕಿಗ ಲಾರೆನ್ಸ್, ಅಂಬರೀಶ್, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಎಬಿಡಿ ಗ್ರೂಪ್ ಅಧ್ಯಕ್ಷ ರಾಜೀವ್‌ಗೌಡ, ಬ್ರಹ್ಮರ್ಷಿ ಆನಂದ ಸಿದ್ದಿ ಪೀಠದ ಮಹರ್ಷಿ ಡಾ.ಆನಂದಗುರೂಜಿ ಹಾಗು ದೇವಾಲಯ ಸೇವಾ ಸಮಿತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!