Home News Chintamani ಚಿಂತಾಮಣಿಯಲ್ಲಿ ಕಾನೂನು ಸುವ್ಯವಸ್ಥೆ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ

ಚಿಂತಾಮಣಿಯಲ್ಲಿ ಕಾನೂನು ಸುವ್ಯವಸ್ಥೆ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ

0
Chintamani Bandh Prohibition

Chintamani : ಗುಪ್ತಚರ ಇಲಾಖೆಯಿಂದ ಲಭಿಸಿದ ಮಾಹಿತಿಯ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ 20 ರ ರಾತ್ರಿ 10 ಗಂಟೆಯಿಂದ ಮೇ 23 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ತಾಲ್ಲೂಕು ದಂಡಾಧಿಕಾರಿ ಸುದರ್ಶನ ಯಾದವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಗರವನ್ನು ಅತಿ ಸೂಕ್ಷ್ಮ ಪ್ರದೇಶವಾಗಿ ಗುರುತಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆ, ಶಾಂತಿ ಮತ್ತು ಆಸ್ತಿ-ಪಾಸ್ತಿಗಳ ರಕ್ಷಣೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ನಗರದ ಅಂಜನಿ ಬಡಾವಣೆ, ಎನ್.ಆರ್. ಬಡಾವಣೆ, ವಿನೋಭಾ ಕಾಲೋನಿ, ಕೆ.ಆರ್. ಬಡಾವಣೆ, ಗಜಾನನ ವೃತ್ತ, ಅಜಾದ್ ಚೌಕ್, ಬೆಂಗಳೂರು ವೃತ್ತ, ತಪತೇಶ್ವರ ಕಾಲೋನಿ ಹಾಗೂ ಸರ್ಕಾರಿ ಕಚೇರಿಗಳ ಸುತ್ತಮುತ್ತಲ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023 ರ ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರ ಠಾಣೆಯ ಇನ್ಸ್‌ಪೆಕ್ಟರ್‌ನಿಂದ ನಿಷೇಧಾಜ್ಞೆ ವಿಧಿಸಲು ಮನವಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿ, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ

ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘನೆಯು ನಡೆದರೆ, ಸಂಬಂಧಪಟ್ಟವರ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version