ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ತಾ.ಪಂ ಸಭಾಂಗಣದಲ್ಲಿ ಶನಿವಾರ ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತ ರಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸುವ ಸಭೆಯಲ್ಲಿ ಸರ್ಕಾರಿ ಅಧಿಕಾರಿಗಳನ್ನುದ್ದೇಶಿಸಿ ಲೋಕಾಯುಕ್ತ ಎಸ್.ಪಿ ಪವನ್‌ನೆಜ್ಜೂರ್ ಮಾತನಾಡಿದರು.

ಸರ್ಕಾರಿ ಅಧಿಕಾರಿಗಳು ಎಷ್ಟೇ ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಸೇವಾವಧಿಯಲ್ಲಿ ಮಾಡಿದ ಒಳ್ಳೆಯ ಕೆಲಸಗಳಿಂದ ಮಾತ್ರ ಜನರಿಗೆ ನೆನಪಿನಲ್ಲಿ ಉಳಿಯುತ್ತಾರೆ. ಜನರ ಹಾಗು ಸರ್ಕಾರದ ಸೇವಕರಾಗಿರುವ ನಾವುಗಳು ನಮ್ಮ ಅಧಿಕಾರಾವಧಿಯಲ್ಲಿ ಒಂದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು. ಯಾವುದೇ ವ್ಯಕ್ತಿ ಸರ್ಕಾರಿ ಕಚೇರಿಗೆ ಬಂದಾಗ ಕುಳಿತುಕೊಳ್ಳಲು ಹೇಳಿ ಒಂದೆರಡು ನಿಮಿಷ ಅವರ ಸಮಸ್ಯೆಯ ಬಗ್ಗೆ ಆಲಿಸುವುದನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರಿ ಅಧಿಕಾರಿಗಳು ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಕೆಲಸ ಮಾಡುವ ಜೊತೆಗೆ ಸಾರ್ವಜನಿಕರ ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ನಡೆದುಕೊಳ್ಳಬಾರದು. ಸಾರ್ವಜನಿಕರಿಗೆ ಬಯಸಿದ ಕೆಲಸ ಮಾಡಲು ಯೋಗ್ಯವಾಗಿದ್ದು ಎಷ್ಟು ದಿನಗಳಲ್ಲಿ ಆಗುತ್ತದೆ ಅಥವ ಅವರ ಕೆಲಸ ಮಾಡಲು ಏನು ತೊಂದರೆಯಿದೆ ಎನ್ನುವುದನ್ನು ಅವರಿಗೆ ಅರ್ಥವಾಗುವ ರೀತಿ ತಿಳಿಹೇಳಿದರೆ ಬಹಳಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗುತ್ತದೆ.ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ ಎಂಬುದನ್ನು ಪ್ರತಿಯೊಬ್ಬ ಸರ್ಕಾರಿ ನೌಕರರು ಮನಗಂಡು ತಮ್ಮ ತಮ್ಮ ಸೇವಾವಧಿಯಲ್ಲಿ ಒಂದಷ್ಟು ಉತ್ತಮ ಕೆಲಸಗಳನ್ನು ಮಾಡಬೇಕು ಎಂದರು.

ಭ್ರಷ್ಟಾಚಾರ ಎಲ್ಲೆಡೆಯೂ ತಾಂಡವವಾಡುತ್ತಿದ್ದು ನಿರ್ಮೂಲನೆ ಮಾಡುವುದು ಕಷ್ಟವಾದರೂ ತಡೆಗಟ್ಟುವ ಕೆಲಸಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ, ಸಾರ್ವಜನಿಕರು ಪ್ರಶ್ನೆ ಮಾಡುವುದನ್ನು ರೂಡಿಸಿಕೊಳ್ಳಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಅಧಿಕಾರಿಗಳು ಮಾಡದೆ ವಿಳಂಬ ಅಥವ ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಹಾಗು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮ ನಡೆಸಿ ಹಣ ದುರುಪಯೋಗ ಸೇರಿದಂತೆ ಲಂಚದ ಬೇಡಿಕೆಯನ್ನಿಟ್ಟರೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಲೋಕಾಯುಕ್ತ ಕಚೇರಿಗೆ ನೇರವಾಗಿ ಅಥವ ಅಂಚೆ ಮೂಲಕ ದೂರು ಸಲ್ಲಿಸಬಹುದು ಎಂದರು.
ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ, ಪೊಲೀಸ್ ಇಲಾಖೆ, ನಗರಸಭೆ, ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂದಿಸಿದಂತೆ ಅರ್ಜಿದಾರರಿಂದ ಒಟ್ಟು ೧೫ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಶ್ರೀನಿವಾಸಲುನಾಯ್ಡು, ತಾ.ಪಂ ಇಓ ಜಿ.ಮುನಿರಾಜು, ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಲೀಂ ಸಿ ನದಾಫ್, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!