Attiganahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾ.ಪಂ ವ್ಯಾಪ್ತಿಯ ಅತ್ತಿಗಾನಹಳ್ಳಿ ಗ್ರಾಮದಲ್ಲಿ ಗುರುವಾರ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ ಅವರು ಮಾತನಾಡಿದರು.
ಗ್ರಾಮದ ವಿದ್ಯಾರ್ಥಿಗಳು ದೂರದ ಶಾಲಾ ಕಾಲೇಜುಗಳಿಗೆ ಹೋಗಲು ಸಮರ್ಪಕ ಬಸ್ ವ್ಯವಸ್ಥೆಯಿಲ್ಲದೇ ಪರದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸಿದ್ದು ಗ್ರಾಮಸ್ಥರು ಸೇರಿದಂತೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ತಾಲ್ಲೂಕಿನ ಚೀಮಂಗಲದಿಂದ ಜಂಗಮಕೋಟೆ ಮೂಲಕ ವಿಜಯಪುರ, ಚಿಕ್ಕಬಳ್ಳಾಪುರಕ್ಕೆ ಪ್ರತಿನಿತ್ಯ ಬೆಳಗ್ಗೆ ಹಾಗು ಸಂಜೆ ಎರಡು ವೇಳೆಗಳಲ್ಲಿ ಬಸ್ ಸಂಚರಿಸಿಲಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇದೇ ರಸ್ತೆಯಲ್ಲಿ ಮತ್ತಷ್ಟು ಬಸ್ ಹಾಕಲಾಗುವುದು ಎಂದರು.
ಅತ್ತಿಗಾನಹಳ್ಳಿ ಗ್ರಾಮಕ್ಕೆ ಸರ್ಕಾರಿ ಬಸ್ ಸಂಚಾರ ಪ್ರಾರಂಭವಾಗುತ್ತಿದ್ದಂತೆ, ಗ್ರಾಮಸ್ಥರೇ ಖುಷಿಯಿಂದ ಬಸ್ಸಿಗೆ ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಿ ಸಂತಸಪಟ್ಟರು.
ಮಾಜಿ ಶಾಸಕ ಎಂ.ರಾಜಣ್ಣ, ಕರಾರಸಾಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಅಲ್ಲೂರಿ ಹಿಮವರ್ಧನ ನಾಯ್ಡು, ವ್ಯವಸ್ಥಾಪಕ ರಾಮಯ್ಯ, ಜಿ.ಪಂ ಮಾಜಿ ಅಧ್ಯಕ್ಷ ಸುಬ್ರಮಣಿ, ಗ್ರಾ.ಪಂ ಸದಸ್ಯ ಮೂರ್ತಿ, ಮಾಜಿ ಸದಸ್ಯ ಚೌಡಪ್ಪ, ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಘು ಹಸಿರುಸೇನೆ ತಾಲೂಕು ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನ್‌ಕುಮಾರ್, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿಪ್ರತೀಶ್, ಗ್ರಾಮಸ್ಥರಾದ ನಾಗೇಶ್, ಆಂಜಿನಪ್ಪ, ಶ್ರೀಕಾಂತ್ ಮತ್ತಿತರರು ಹಾಜರಿದ್ದರು.