Home Sidlaghatta ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ

ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ

0

Sidlaghatta : ಪ್ರತಿಯೊಬ್ಬರೂ ಧಾರ್ಮಿಕವಾಗಿ ಸತ್ಕಾರ್ಯಗಳ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸೇರಿ ಧಾರ್ಮಿಕ ಚಿಂತನೆಗಳನ್ನು ರೂಡಿಸಿಕೊಳ್ಳಬೇಕು. ಸದ್ಗುರು ಶ್ರೀ ಸವಿತಾ ಮಹರ್ಷಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸಲುನಾಯ್ಡು ತಿಳಿಸಿದರು.

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಯೊಂದು ಸಮುದಾಯವನ್ನು ಗೌರವಿಸಿ ಅದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಯಂತಿಗಳನ್ನು ಆಚರಿಸುವ ಕೆಲಸವನ್ನು ನಡೆಸಿದೆ. ಮಹಾನ್ ವ್ಯಕ್ತಿಗಳ ತತ್ವ-ಸಂದೇಶಗಳು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ದೇವ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ತಿಳಿದುಬರುತ್ತದೆ. ಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿರುವುದರಿಂದಲೇ ಚತುರ್ವೇದಗಳಲ್ಲಿ ಒಂದಾದ ಸಾಮವೇದವನ್ನು ಬರೆದಿದ್ದಾರೆ ಎಂದರು.

ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ಎಚ್.ನಾರಾಯಣಸ್ವಾಮಿ ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸೇವೆ ಮಾಡುವ ಅವಕಾಶ ಸಿಗುವ ಜೊತೆಗೆ ತಾವು ಮಾಡುವ ಸೇವೆಯಿಂದ ಆತ್ಮತೃಪ್ತಿ ಲಭಿಸುತ್ತದೆ. ಸವಿತಾ ಮಹರ್ಷಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದರು.

ಸವಿತಾ ಸಮಾಜದ ಗೌರವಾಧ್ಯಕ್ಷ ಎ.ವೈ.ನಾಗಪ್ಪ, ಬಿಸಿಎಂ ಇಲಾಖೆಯ ಅಧಿಕಾರಿ ನಾರಾಯಣಪ್ಪ, ಸವಿತಾ ಸಮಾಜದ ಮುಖಂಡರಾದ ಲಕ್ಷ್ಮಿವೆಂಕಟೆಶ್ವರಪ್ಪ, ಈಶ್ವರಪ್ಪ, ಎಲ್ಲಪ್ಪ, ಅರವಿಂದ, ವೇಣು, ಬಾಲರಾಜು, ಮುರಳಿ, ಪ್ರತಾಪ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version