Home Sidlaghatta ಅಬ್ಲೂಡು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಅಬ್ಲೂಡು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

0

Abludu, Sidlaghatta ಶಿಡ್ಲಘಟ್ಟ ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗವೇಣಿ, ಉಪಾಧ್ಯಕ್ಷರಾಗಿ ಕೆ.ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯ ಬಲ ಹೊಂದಿರುವ ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ, ಮೀಸಲು ನಿಗದಿಪಡಿಸಲಾಗಿದ್ದು ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಚೀಮನಹಳ್ಳಿಯ ನಾಗವೇಣಿ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಬ್ಲೂಡು ಗ್ರಾಮದ ಕೆ.ನಾರಾಯಣಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಬೇರಾರು ನಾಮ ಪತ್ರ ಸಲ್ಲಿಸದೇ ಇರುವುದರಿಂದ ನಾಗವೇಣಿ ರನ್ನು ಅಧ್ಯಕ್ಷರನ್ನಾಗಿ, ಹಾಗೂ ಕೆ. ನಾರಾಯಣಸ್ವಾಮಿ ರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಮಂಜುಳ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version