Chikkaballapur : ರೈತರು 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ರೈತರ ಮೊಬೈಲ್ ಆ‍್ಯಪ್ ಬಿಡುಗಡೆ ಮಾಡಿದೆ (Agriculture Crop Survey App) ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಗೇಪಲ್ಲಿ ತಾಲ್ಲೂಕಿನಲ್ಲಿ 103 ಸ್ಥಳ, ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 90, ಚಿಂತಾಮಣಿ ತಾಲ್ಲೂಕಿನಲ್ಲಿ 50, ಗೌರಿಬಿದನೂರು ತಾಲ್ಲೂಕಿನಲ್ಲಿ 201, ಮಂಚೇನಹಳ್ಳಿ ತಾಲ್ಲೂಕಿನಲ್ಲಿ 41, ಗುಡಿಬಂಡೆಯಲ್ಲಿ 10 ಸ್ಥಳ ಮತ್ತು ಶಿಡ್ಲಘಟ್ದಲ್ಲಿ 57 ಸ್ಥಳದಲ್ಲಿ ರೈತರು ಆ‍್ಯಪ್‌ನಲ್ಲಿ ಬೆಳೆ ಸಮೀಕ್ಷೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಬೆಳೆ ಸಮೀಕ್ಷೆಗೆ ಗೂಗಲ್ ಪ್ಲೇ-ಸ್ಟೋರ್‌ನಿಂದ http://play.google.com/store/apps/details?id+com.csk.farmer2023-24.cropsurvey ಡೌನ್‌ಲೋಡ್ ಮಾಡಿಕೊಳ್ಳಬಹುದು.