Chikkaballapur : ಚಿಕ್ಕಬಳ್ಳಾಪುರ ನಗರದ KSRTC ಬಸ್ ನಿಲ್ದಾಣದಲ್ಲಿ ಕೆಂಪೇಗೌಡ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ I.C.T.C ವಿಭಾಗ ಆಶ್ರಯದಲ್ಲಿ ಬುಧವಾರ HIV, Aids ನಿಯಂತ್ರಣದ ಜಾಗೃತಿ ಕಾರ್ಯಕ್ರಮ (Awareness Program) ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬೀದಿ ನಾಟಕ (Street Play) ಮತ್ತು ಕಲಾಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೆಂಪೇಗೌಡ ಕಾನೂನು ವಿದ್ಯಾಲಯದ ಪ್ರಾಂಶುಪಾಲ ಪ್ರೊ.ಬಿ.ಜಿ.ಶೋಭಾ “ಎಚ್.ಐ.ವಿ ಸೋಂಕು ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದ್ದು ಎಚ್.ಐ.ವಿ ನಿಯಂತ್ರಣಕ್ಕಾಗಿ ಸರ್ಕಾರ ಸಾಕಷ್ಟು ಹಣ ವ್ಯಯಿಸುತ್ತಿದೆ. ಜನರು ಜಾಗೃತರಾಗಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು” ಎಂದು ತಿಳಿಸಿದರು.
ಉಪನ್ಯಾಸಕರಾದ ಮಂಜುನಾಥ್, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.