Monday, May 27, 2024
HomeBagepalliಜಿಲ್ಲೆಯಾದ್ಯಂತ ಅಂಬೇಡ್ಕರ್– ಬಾಬು ಜಗಜೀವನ ರಾಂ ಜಯಂತಿ ಸಂಭ್ರಮ

ಜಿಲ್ಲೆಯಾದ್ಯಂತ ಅಂಬೇಡ್ಕರ್– ಬಾಬು ಜಗಜೀವನ ರಾಂ ಜಯಂತಿ ಸಂಭ್ರಮ

- Advertisement -
- Advertisement -
- Advertisement -
- Advertisement -

ಚಿಕ್ಕಬಳ್ಳಾಪುರ

Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಅಂಬೇಡ್ಕರ್ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಯಿತು. ಜಯಂತಿ ಅಂಗವಾಗಿ ಜಿಲ್ಲಾಡಳಿತ ಚಿಕ್ಕಬಳ್ಳಾಪುರ ನಗರದ ಜೈಭೀಮ್ ವಿದ್ಯಾರ್ಥಿ ನಿಲಯದಿಂದ ‘ಸಾಮಾಜಿಕ ನ್ಯಾಯದೆಡೆಗೆ’ ಹೆಸರಿನ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ನಿಲಯದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ, ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಚಾಲನೆ ನೀಡಿದರು.

ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ನಂದಿ ರಂಗ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್, ಮಾವು ಅಭಿವೃದ್ಧಿ ಮತ್ತು ಮಾರಾಟ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಕೇಶವರೆಡ್ಡಿ, ದಲಿತ ಮುಖಂಡರಾದ ಬಾಲಕುಂಟಹಳ್ಳಿ ಗಂಗಾಧರ್, ಸು.ಧಾ. ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

ಬಾಗೇಪಲ್ಲಿ

Bagepalli : ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ತಾಲ್ಲೂಕು ಆಡಳಿತ, ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಹಮ್ಮಿಕೊಳಲಾಗಿತ್ತು.

ಕಾರ್ಯಕ್ರಮವನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ , ಪುರಸಭೆ ಅಧ್ಯಕ್ಷೆ ರೇಷ್ಮಾಬಾನು ನಯಾಜ್ ಮತ್ತು ಉಪಾಧ್ಯಕ್ಷ ಎ. ಶ್ರೀನಿವಾಸ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಕೆ. ಮಧುಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಸಿದ್ದಪ್ಪ, ಸರ್ಕಲ್ ಇನ್‌ಸ್ಪೆಕ್ಟರ್ ಡಿ.ಆರ್. ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿ.ಎನ್. ಶೇಷಾದ್ರಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಗೌರಿಬಿದನೂರು

Gauribidanur : ಗೌರಿಬಿದನೂರು ಹೊರವಲಯದ ಸಮಾನತಾ ಸೌಧದಲ್ಲಿ ತಾಲ್ಲೂಕು ಆಡಳಿತದಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ಜಯಂತಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಕೆ.ಆರ್. ರಮೇಶ್ ಕುಮಾರ್ ಮತ್ತು ಶಾಸಕ ಎನ್‌.ಎಚ್. ಶಿವಶಂಕರರೆಡ್ಡಿ ‌ಉದ್ಘಾಟಿಸಿದರು.

ಕಾರ್ಯಕ್ರಮಕ್ಕೂ ಮುನ್ನ ತಾಲ್ಲೂಕುಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಸಮುದಾಯದ ಮುಖಂಡರು ಮತ್ತು ನಾಗರಿಕರು ನೀಲಿ ಬಣ್ಣದ ಧ್ವಜಗಳನ್ನು ಹಿಡಿದು ಕಲಾ ತಂಡಗಳೊಂದಿಗೆ ನಗರದ ಶ್ರೀಶನಿ ಮಹಾತ್ಮ ದೇವಾಲಯದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ಮೂಲಕ ಬಂದು ಅಂಬೇಡ್ಕರ್ ಸ್ತೂಪಕ್ಕೆ ಮಾಲಾರ್ಪಣೆ ಮಾಡಿದರು.

ತಹಶೀಲ್ದಾರ್ ‌ಎಚ್. ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹದೇವಸ್ವಾಮಿ, ತಾ.ಪಂ. ಇಒ ಆರ್. ಹರೀಶ್, ಪೌರಾಯುಕ್ತ ವಿ. ಸತ್ಯನಾರಾಯಣ, ಸಿಪಿಐ ಎಸ್.ಡಿ. ಶಶಿಧರ್, ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ. ಗಂಗಾಧರಮೂರ್ತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ನಗರಸಭೆ ಅಧ್ಯಕ್ಷೆ ಎಸ್. ರೂಪಾ, ಮುಖಂಡರಾದ ವೇದಲವೇಣಿ ಎನ್. ವೇಣು, ಹನುಮಂತರೆಡ್ಡಿ, ‌ಕೆ.ಎನ್. ಕೇಶವರೆಡ್ಡಿ, ಎಚ್.ಎನ್. ಪ್ರಕಾಶರೆಡ್ಡಿ, ಬಿ.ಪಿ. ಅಶ್ವತ್ಥನಾರಾಯಣಗೌಡ, ಇಬ್ನಿ ಹಸನ್, ಜಿ. ಸೋಮಯ್ಯ, ಸಿ.ಜಿ. ಗಂಗಪ್ಪ, ನಾಗರಾಜಪ್ಪ, ನರಸಿಂಹಮೂರ್ತಿ, ಇಂದ್ರಕುಮಾರ್, ಬಿ.ಕೆ. ನರಸಿಂಹಮೂರ್ತಿ, ಎಚ್.ಎಲ್. ವೆಂಕಟೇಶ್, ನಂಜುಂಡಪ್ಪ, ಸನಂದಕುಮಾರ್ ಮತ್ತಿತ್ತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .

ಗುಡಿಬಂಡೆ

Gudibande : ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ ರಾಂ, ಮಹಾವೀರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸಿಗ್ಬತ್‌ ಉಲ್ಲಾ , ಕಸಾಪ ಅಧ್ಯಕ್ಷ ಸುಬ್ಬರಾಯಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ತಹಶೀಲ್ದಾರ್ ಮಹೇಶ್ ಪತ್ರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಕಚೇರಿ ಅಧೀಕ್ಷಕ ದಾಸಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಶೀರ ರಿಜ್ವಾನ್, ಉಪಾಧ್ಯಕ್ಷ ಅನಿಲ್ ಕುಮಾರ್, ಮುಖ್ಯಾಧಿಕಾರಿ ರಾಜಶೇಖರ್, ಬಿಸಿಎಂ ರಾಮಯ್ಯ, ಸಿಡಿಪಿಒ ರಫೀಕ್, ಕೃಷಿ ಇಲಾಖೆಯ ಎಡಿಎ ಅಮರನಾರಾಯಣರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಸಬ್ ಇನ್‌ಸ್ಪೆಕ್ಟರ್ ಪ್ರತಾಪ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ರಾಜ್ಯ ದಿಗಂಬರ ಜೈನ್ ಟ್ರಸ್ಟ್ ಅಧ್ಯಕ್ಷ ಪುಟ್ಟಣಯ್ಯ, ಮುಖಂಡರಾದ ಜಿ.ವಿ. ಗಂಗಪ್ಪ, ಅಮರಾವತಿ, ರಮಣಪ್ಪ, ನಾರಾಯಣಸ್ವಾಮಿ, ಸುಬ್ಬರಾಯಪ್ಪ, ರಾಮಾಂಜನೇಯ, ಕದಿರಪ್ಪ, ಚನ್ನರಾಯಪ್ಪ ಉಪಸ್ಥಿತರಿದ್ದರು.

ಚಿಂತಾಮಣಿ

Chintamani : ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಗುರುವಾರ ಚಿಂತಾಮಣಿ ನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಹಾಗೂ ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಎಂ. ಕೃಷ್ಣಾರೆಡ್ಡಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್, ಹಶೀಲ್ದಾರ್ ಹನುಮಂತರಾಯಪ್ಪ, ನಗರಸಭೆ ಪೌರಾಯುಕ್ತ ಉಮಾಶಂಕರ್, ಉಪಾಧ್ಯಕ್ಷೆ ಸುಹಾಸಿನಿ ರೆಡ್ಡಿ, ಸದಸ್ಯರಾದ ಅಗ್ರಹಾರ ಮುರಳಿ, ಮಂಜುನಾಥ್, ಮಹ್ಮದ್ ಗೌಸ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಹರ್ಷವರ್ಧನ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಡಿವೈಎಸ್‌ಪಿ ಚಂದ್ರಶೇಖರ್, ಸಿಡಿಪಿಒ ಮಹೇಂದ್ರ ಉಪಸ್ಥಿತರಿದ್ದರು.

ಶಿಡ್ಲಘಟ್ಟ

Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಮುಂಭಾಗ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಹಾಗೂ ಡಾ.ಬಾಬು ಜಗಜೀವನ ರಾಂ ರವರ 115 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಶಾಸಕ ವಿ.ಮುನಿಯಪ್ಪ ಅವರು ಮಾತನಾಡಿದರು.

ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್. ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿದ, ಅಸಹಾಯಕರ ಧ್ವನಿಯಾದ, ಸಮಾನತೆಯ ಕನಸು ಕಂಡ, ಎಲ್ಲರ ಬದುಕಿಗೆ ಸ್ಫೂರ್ತಿಯಾದ ಈ ಮಹಾನ್ ನಾಯಕರ ಕೊಡುಗೆಯನ್ನು ಸದಾ ಸ್ಮರಿಸೋಣ. ವಿದೇಶಗಳಿಂದ ಆಹಾರ ಧಾನ್ಯಗಳನ್ನು ರಪ್ತು ಮಾಡಿಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ದೇಶದಲ್ಲಿ ಹಸಿರು ಕ್ರಾಂತಿಯನ್ನು ಹುಟ್ಟುಹಾಕಿದ ದೇಶದ ಮಾಜಿ ಉಪಪ್ರದಾನಿ ಡಾ.ಬಾಬುಜಗಜೀವನರಾಂ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ಇಂದು ನೆಮ್ಮದಿಯಿಂದ ಊಟ ಮಾಡುವಂತಾಗಿದೆ ಎಂದರು.

ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೂ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‌ರಾಂ ಅವರ ಭಾವ ಚಿತ್ರಗಳನ್ನು ಹೊತ್ತ ಮುತ್ತಿನ ಪಲಕ್ಕಿಗಳ ಮೆರವಣಿಗೆ ನಡೆಸಲಾಯಿತು. ಡೊಳ್ಳು ಕುಣಿತ, ತಮಟೆ ವಾದನ ಜನರನ್ನು ಆಕರ್ಷಿಸಿದವು. ಅಂಬೇಡ್ಕರ್ ಭವನಕ್ಕೆಂದು ಸಮಾಜ ಕಲ್ಯಾಣ ಇಲಾಖೆಗೆ 35 ಕುಂಟೆ ಜಾಗವನ್ನು ಹಸ್ಥಾಂತರ ಮಾಡಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ 30 ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲಾಯಿತು.

ತಹಶೀಲ್ದಾರ್ ಬಿ.ಎಸ್.ರಾಜೀವ್,  ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಮಾಜ ಕಲ್ಯಾಣ್ಯಾಧಿಕಾರಿ ಎಚ್.ಜಗದೀಶ್, ಸರ್ಕಲ್ ಇನ್ಸ್ ಪೆಕ್ಟರ್ ಧರ್ಮೇಗೌಡ, ನಗರಸಭೆ ಸದಸ್ಯರಾದ ಕೃಷ್ಣಮೂರ್ತಿ, ವೆಂಕಟಸ್ವಾಮಿ, ಅನಿಲ್‌ಕುಮಾರ್, ಶಿವಮ್ಮ ಮುನಿರಾಜು,  ವಲಯ ಅರಣ್ಯಾಧಿಕಾರಿ ಶ್ರೀಲಕ್ಷ್ಮಿ, ದಲಿತ ಮುಖಂಡರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!