Chikkaballapur : ಶುಕ್ರವಾರ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಅಂಗನವಾಡಿ ನೌಕರರ (Anganwadi Workers) ಜಿಲ್ಲಾ ಸಮಾವೇಶದಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭ, ಅಂಗನವಾಡಿ ಬಲಪಡಿಸುವುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 10ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಹೋರಾಟ ನಡೆಸುವರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಅಧ್ಯಕ್ಷೆ ವರಲಕ್ಷ್ಮಿ ತಿಳಿಸಿದರು.
RTI ಹೆಸರಿನಲ್ಲಿ ಕಾರ್ಯಕರ್ತೆಯರ ಮೇಲೆ ಆಗುತ್ತಿರುವ ದಬ್ಬಾಳಿಕೆ ನಿಲ್ಲಬೇಕು ಹಾಗೆಯೇ ನೌಕರರನ್ನು ಕಾಯಂ ಮಾಡಬೇಕು. ಕಾಯಂ ಮಾಡುವವರೆಗೆ ಮಾಸಿಕ ₹ 26 ಸಾವಿರ ವೇತನ ನೀಡಬೇಕು. ಸಮಾಜ ಬದಲಾವಣೆ ಬಯಸುತ್ತಿದ್ದರೂ ಅಂಗನವಾಡಿ ಕೇಂದ್ರಗಳು ಯಥಾಸ್ಥಿತಿಯಲ್ಲಿವೆ. ಅಂಗನವಾಡಿ ಕೇಂದ್ರಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ, ಅಂಗನವಾಡಿಗಳು ಮಕ್ಕಳನ್ನು ಆಕರ್ಷಿಸುವಂತಿರಬೇಕು.
ಅನಿರ್ದಿಷ್ಟಾವಧಿ ಹೋರಾಟದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಸಭೆ ನಡೆಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಫಾರಸು ಮಾಡಿರುವ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು. ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ನಡೆಸಲಾಗುತ್ತಿದೆ. ಜಿಲ್ಲೆಯ ಅಂಗನವಾಡಿ ಸಿಬ್ಬಂದಿ ಈ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಒಗ್ಗೂಡಿ ಹಕ್ಕುಗಳನ್ನು ಪಡೆಯಬೇಕು ಎಂದು ವರಲಕ್ಷ್ಮಿ ಹೇಳಿದರು.
ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ವೆಂಕಟಲಕ್ಷ್ಮಿ, ಅಶ್ವತ್ಥಮ್ಮ, ಗುಲ್ಜಾರ್, ಸುಜಾತ, ಮುನಿರತ್ನ, ಪದ್ಮಾವತಿ ಬಾಯಿ ಹಾಗೂ ಜಿಲ್ಲೆಯ ಅಂಗನವಾಡಿ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur