Home News Chintamani ಆಸ್ಟ್ರೇಲಿಯಾ ಕ್ರಿಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ತಯಾರಿ

ಆಸ್ಟ್ರೇಲಿಯಾ ಕ್ರಿಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ತಯಾರಿ

0
Australia Agriculture University in Bengaluru M C Sudhakar

Chintamani : ಆಸ್ಟ್ರೇಲಿಯಾದ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯ ರಾಜ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಆಸಕ್ತಿ ವ್ಯಕ್ತಪಡಿಸಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಯೋಜನೆ ರೂಪಿಸುವಂತೆ ಸಲಹೆ ನೀಡಿದರು.

ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಕುಲಪತಿ ಜಾರ್ಜ್ ವಿಲಿಯಮ್ಸ್ ಮತ್ತು ಭಾರತದಲ್ಲಿನ ಆಸ್ಟ್ರೇಲಿಯ ಕಾನ್ಸುಲೇಟ್ ಮೆಕ್‌ಗೀಚೀ ಅವರ ನಿಯೋಗವು ಶುಕ್ರವಾರ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿತು.

“ಸಿಡ್ನಿ ವಿಶ್ವವಿದ್ಯಾಲಯವು ಕೃಷಿ ನೀರಾವರಿ ತಂತ್ರಜ್ಞಾನ, ಆಹಾರ ಸಂಸ್ಕರಣೆ, ಮತ್ತು ಕೃಷಿ ಉತ್ಪನ್ನಗಳ ಮೌಲ್ಯವೃದ್ಧಿಯಲ್ಲಿ ಪರಿಣತಿ ಹೊಂದಿದೆ. ಬೆಂಗಳೂರಿನಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಬಯಸುತ್ತದೆ. ಇದು ಸ್ವತಂತ್ರವಾಗಿ ಅಥವಾ ಸ್ಥಳೀಯ ವಿಶ್ವವಿದ್ಯಾಲಯಗಳ ಸಹಯೋಗದ ಮೂಲಕ ಕಾರ್ಯನಿರ್ವಹಿಸಲು ಸಿದ್ಧವಾಗಿದೆ” ಎಂದು ನಿಯೋಗವು ತಿಳಿಸಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version