ಅಯೋಧ್ಯೆ ರಾಮ ಮಂದಿರ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ದೇವಾಲಯಕ್ಕೆ ಒತ್ತಾಯ

- Advertisement -
- Advertisement -

Sidlaghatta : ವಾಲ್ಮೀಕಿ ಸಮುದಾಯದ ಪ್ರಮುಖ ಬೇಡಿಕೆಗಳಾದ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟುವುದು, ಬುಡಕಟ್ಟು ವಿಶ್ವ ವಿದ್ಯಾನಿಲಯ ಸ್ಥಾಪನೆ ಸೇರಿದಂತೆ ಅಯೋಧ್ಯೆ ರಾಮ ಮಂದಿರ ಆವರಣದಲ್ಲಿ ರಾಮಾಯಣ ಕರ್ತೃ ಮಹರ್ಷಿ ವಾಲ್ಮೀಕಿ ದೇವಾಲಯ ನಿರ್ಮಾಣ ಮಾಡುವಂತೆ ಈ ಭಾರಿಯ ವಾಲ್ಮೀಕಿ ಜನಜಾಗೃತಿ ಜಾತ್ರೆಯಲ್ಲಿ ಒತ್ತಾಯ ಹೇರಲಾಗುವುದು ಎಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಸ್ವಾಮಿ ಹೇಳಿದರು.

ಮುಂಬರುವ ಫೆ.8 ಮತ್ತು 9 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿರುವ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ವಾಲ್ಮೀಕಿ ಜನಜಾಗೃತಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಶ್ರೀಗಳು ನಗರದ ವಾಲ್ಮೀಕಿ ಭವನದಲ್ಲಿ ಸಮುದಾಯದ ಮುಖಂಡರ ಸಭೆ ನಡೆಸಿ ಮಾತನಾಡಿದರು.

ನಾಡಿನ ಸುಮಾರು 60 ಲಕ್ಷಕ್ಕೂ ಹೆಚ್ಚಿನ ವಾಲ್ಮೀಕಿ ಸಮುದಾಯದವರಿಗೆ ತಮ್ಮದೇ ಆದ ಚಾರಿತ್ರ್ಯಕ ಹಿನ್ನಲೆ ಹಾಗು ಇತಿಹಾಸವಿದೆ. ಸಮುದಾಯದ ಜನರಲ್ಲಿ ವೈಚಾರಿಕತೆ, ಜಾಗೃತಿ ಮೂಡಿಸುವುದು ವಾಲ್ಮೀಕಿ ಜನಜಾಗೃತಿ ಜಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ವಿವಿದೆಡೆಯಿಂದ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆಯಿದ್ದು ಇದು ಕೇವಲ ಜಾತ್ರೆಯಾಗಿರದೇ ಸಮುದಾಯದ ಜಾಗೃತಿ ಮೂಡಿಸುವ ವೇದಿಕೆಯಾಗಬೇಕು. ಅಭಿವೃದ್ಧಿಯಲ್ಲಿ ಹಿಂದುಳಿದಿರುವ ವಾಲ್ಮೀಕಿ (ನಾಯಕ) ಸಮುದಾಯದ ನೋವು ಆಡಳಿತಾರೂಢ ಸರ್ಕಾರಗಳಿಗೆ ತಿಳಿಯುವಂತೆ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಜಿಲ್ಲಾಧ್ಯಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಸಮುದಾಯದ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆಯಾದರೂ ಗುರುಪೀಠಕ್ಕೆ ಭೇಟಿ ನೀಡುವುದನ್ನು ರೂಡಿಸಿಕೊಳ್ಳಬೇಕು. ಇದರಿಂದ ರಾಜ್ಯಾದ್ಯಂತ ಇರುವ ಸಮುದಾಯದವರು ಒಗ್ಗಟ್ಟಾಗಿರಲು ಸಾಧ್ಯವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಆಚರಣಾ ಸಮಿತಿಗೆ ತಾಲ್ಲೂಕಿನಿಂದ ಐದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಮುದಾಯದ ಮುಖಂಡರಾದ ಗೊರಮಿಲ್ಲಹಳ್ಳಿ ವೆಂಕಟೇಶ್, ದ್ಯಾವಪ್ಪ, ಜೆ.ಎಂ.ವೆಂಕಟೇಶ್, ಮುಗಿಲಡಿಪಿ ನಂಜಪ್ಪ, ಮುನಿನರಸಿಂಹಪ್ಪ, ನಾರಾಯಣಸ್ವಾಮಿ, ಮುತ್ತೂರು ವೆಂಕಟೇಶ್, ಆನಂದ್, ಶ್ರೀನಾಥ್, ಚಿಂತಡಿಪಿ ಮಾರುತಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!