27.6 C
Bengaluru
Wednesday, January 14, 2026

ಆಯುಷ್ಮಾನ್ ಭವ ಅಭಿಯಾನ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭವ ಅಭಿಯಾನದ ಶುಭಾರಂಭವನ್ನು ಶಾಸಕ ಬಿ.ಎನ್.ರವಿಕುಮಾರ್ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಆಯುಷ್ಮಾನ್ ಭವ ಅಭಿಯಾನವು ಕೇಂದ್ರ ಸರ್ಕಾರದ ಎಲ್ಲಾ ಆರೋಗ್ಯ ಯೋಜನೆಗಳ ಸಮಗ್ರ ಗುಚ್ಚವಾಗಿದೆ. ಸೆಪ್ಟೆಂಬರ್ 17 ರಂದು ಪ್ರಧಾನಿ ಮೋದಿ ಜನ್ಮ ದಿನದ ಅಂಗವಾಗಿ ಆರಂಭವಾಗುವ 15 ದಿನಗಳ ಸೇವಾ ಪಾಕ್ಷಿಕ ಕಾರ್ಯಕ್ರಮವು ಅಕ್ಟೋಬರ್ 2 ರಂದು ಮುಕ್ತಾಯವಾಗಲಿದೆ. ಈ ಅವಧಿಯಲ್ಲಿ ಆರೋಗ್ಯ ಸೇವೆಗಳ ಮಾಹಿತಿ, ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಮಾಹಿತಿ ಹಾಗೂ ಆರೋಗ್ಯ ಜಾಗೃತಿ ಶಿಬಿರಗಳು ನಡೆಯಲಿವೆ. ಇದರ ಉಪಯೋಗ ಕ್ಷೇತ್ರದ ಜನಸಾಮಾನ್ಯರಿಗೆ ಸಿಗಬೇಕು” ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, “ಈ ಅಭಿಯಾನದಡಿ ಫಲಾನುಭವಿಗಳ ಪ್ರತಿ ಮನೆಗೂ ಆಯುಷ್ಮಾನ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತದೆ. ಜೊತೆಯಲ್ಲೇ ಆಯುಷ್ಮಾನ್ ಮೇಳ ಕೂಡಾ ಆಯೋಜನೆಯಾಗಿದೆ. ಒಂದು ವಾರದ ಮಟ್ಟಿಗೆ ನಡೆಯಲಿರುವ ಈ ಮೇಳವನ್ನು ದೇಶದ ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲೂ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಇದಲ್ಲದೆ ಆಯುಷ್ಮಾನ್ ಸಭಾ ಎಂಬ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಹಾಗೂ ನಗರ ಪ್ರದೇಶಗಳ ವಾರ್ಡ್‌ಗಳ ಮಟ್ಟದಲ್ಲಿ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಆರೋಗ್ಯ ಯೋಜನೆಗಳು ಹಾಗೂ ಸೇವೆಗಳ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಲಾಗುವುದು” ಎಂದು ವಿವರಿಸಿದರು.

ನಗರಸಭೆಯ ಅಧ್ಯಕ್ಷೆ ಸುಮಿತ್ರ ರಮೇಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಾದೂರು ರಘು, ನಗರಸಭೆ ಸದಸ್ಯರಾದ ಅನಿಲ್ ಕುಮಾರ್, ಮಂಜುನಾಥ್, ಮನೋಹರ್, ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ. ಉಮೇಶ್, ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಅಧಿಕಾರಿ ಚಂದ್ರಶೇಖರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ವಾಣಿ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನವತಾಜ್, ಬಿಸಿಎಂ ಅಧಿಕಾರಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಜಗದೀಶ್, ಶಿಕ್ಷಣ ಇಲಾಖೆಯ ಮಂಜುನಾಥ್, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ, ಎನ್‌.ಜಿ.ಒ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!