Bagepalli : ಜಮೀನಿನ ಖಾತೆ ಮಾಡಿಕೊಡಲು ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಬಾಗೇಪಲ್ಲಿ ತಾಲ್ಲೂಕಿನ ತಿಮ್ಮಂಪಲ್ಲಿ ಗ್ರಾಮದ ಗ್ರಾಮ ಲೆಕ್ಕಿಗ (Village Accountant) ಶಿವಕುಮಾರ್ ಭ್ರಷ್ಟಾಚಾರ ನಿಗ್ರಹ ದಳದ (ACB) ಬಲೆಗೆ ಬಿದ್ದಿದ್ದಾರೆ.
ಶಿವಕುಮಾರ್ ತಿಮ್ಮಂಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮರವಾರಪಲ್ಲಿ ಗ್ರಾಮದ ರೈತ ಚಂದ್ರಶೇಖರ್ ಎಂಬುವರಿಗೆ ಜಮೀನಿನ ಖಾತೆ ಮಾಡಿಕೊಡಲು ₹ 35000 ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಚಂದ್ರಶೇಖರ್ ಎಬಿಸಿಗೆ ದೂರು ನೀಡಿದ್ದರು.
ಬಾಗೇಪಲ್ಲಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ NH-7ರ ಸುಂಕಲಮ್ಮ ದೇವಾಲಯದ ಬಳಿ ₹ 25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಬಳ್ಳಾಪುರದ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಪ್ರವೀಣ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಗ್ರಾಮ ಲೆಕ್ಕಿಗನನ್ನು ವಶ ಪಡೆದು ಭ್ರಷ್ಟಾಚಾರ ನಿಗ್ರಹದ ದಳದ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur