ನ. 29 ರಿಂದ ಕೃಷಿ ಕೂಲಿಕಾರರ ರಾಜ್ಯ ಸಮ್ಮೇಳನ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಅವರು ನ.29 ರಿಂದ ಡಿ.1 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Bagepalli) ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಕೃಷಿ ಕೂಲಿಕಾರರ ರಾಜ್ಯ ಮಟ್ಟದ 8ನೇ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು

ಜಿಲ್ಲೆಯಲ್ಲಿ ಮತ್ತು ಬಾಗೇಪಲ್ಲಿಯಲ್ಲಿ ಅತಿ ಹೆಚ್ಚು ಕೃಷಿಕೂಲಿಕಾರರು ಇರುವ ಹಿನ್ನೆಲೆಯಲ್ಲಿ ಬಾಗೇಪಲ್ಲಿಯಲ್ಲಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪ್ರತಿನಿಧಿಗಳು ಸೇರಿದಂತೆ 10 ರಿಂದ 15 ಸಾವಿರ ಜನರು ಸಮ್ಮೇಳನದಲ್ಲಿ ಭಾಗಿಯಾಗಲಿದ್ದು, ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟಗಳ ರೂಪುರೇಷೆಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!