Bagepalli : ಬಾಗೇಪಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಬಂದ Congress ಕಾರ್ಯಕರ್ತರು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮನೆ ಮುಂದೆ ಸೋಮವಾರ ಜಮಾಯಿಸಿ, ನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಭಾಗವಹಿಸಲು ಕನಕಪುರಕ್ಕೆ ತೆರಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ ಮಾತನಾಡಿ ” KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ತಾಲ್ಲೂಕಿನಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ’ ಎಂದು ಹೇಳಿದರು.
ಯುವಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಿಜಾಮುದ್ದೀನ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು ಮತ್ತು ಕಾಂಗ್ರೆಸ್ ಕಾರ್ಯುಕರ್ತರು ಪಾಲ್ಗೊಂಡಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur