Bagepalli : ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ ಬುಧವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ಕೋವಿಡ್ 19 (Covid 19) ರೂಪಾಂತರಿ ತಳಿ ವೈರಸ್ ಟಾಸ್ಕ್ ಪೋರ್ಸ್ ಸಭೆ (Task Force Meeting) ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು “ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್-19 ರೂಪಾಂತರಿ ತಳಿ ಜೆ.ಎನ್.1 ವೈರಸ್ ಪತ್ತೆಯಾಗಿದ್ದು ತಾಲ್ಲೂಕಿನಲ್ಲಿ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲು ಅಧಿಕಾರಿಗಳು ಜಾಗೃತರಾಗಿರಬೇಕು. ಆಸ್ಪತ್ರೆಗಳಿಗೆ ರೋಗಿಗಳು ಹೆಚ್ಚಾಗಿ ಬರುತ್ತಿದ್ದು, ಪರೀಕ್ಷೆ ನಡೆಸಬೇಕು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶಿಕ್ಷಕರು, ಅಂಗನವಾಡಿ, ಆಶಾ ಹಾಗೂ ಆರೋಗ್ಯ ಸಿಬ್ಬಂದಿಯವರು ಮನೆ ಮನೆಗೆ ಭೇಟಿ ನೀಡಿ ವೈರಸ್ ಹರಡುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕು. ಪಟ್ಟಣದ ಹೊರವಲಯದ ಅಗ್ನಿಶಾಮಕ ಠಾಣೆಯ ಹಿಂಭಾಗದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ , ತಹಶೀಲ್ದಾರ್ ಪ್ರಶಾಂತ್ ಕೆ.ಪಾಟೀಲ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುಷ್ಮಾ, ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಯ್ಯ, ಸಬ್ ಇನ್‌ಸ್ಪೆಕ್ಟರ್ ಸಂಗಮೇಶ್, ಕ್ಷೇತ್ರ ಸಮನ್ವಾಧಿಕಾರಿ ವೆಂಕಟರಾಮಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
[…] post ಜೆ.ಎನ್.1 ವೈರಸ್ ತಡೆಯಲು ಮುನ್ನೆಚ್ಚರಿಕಾ ಕ… appeared first on […]