Bagepalli : 2022-23ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು (Dasara Sports Championship) ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ ಅವರು ಉದ್ಘಾಟನೆ ಮಾಡಿದರು.
ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಬೆಳೆಯುತ್ತದೆ ಎಂದು ಅವರು ತಿಳಿಸಿದರು.
ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ಮಲ್ಲೇಶರಪ್ಪ, ಅಕ್ಷರ ದಾಸೋಹದ ತಾಲ್ಲೂಕು ಸಹಾಯಕ ನಿರ್ದೇಶಕ ಪಿ.ಎಸ್.ನರಸಿಂಹರೆಡ್ಡಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಉಪಾಧ್ಯಕ್ಷ ಸಿ.ವೆಂಕಟರಾಯಪ್ಪ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ವಿ.ನರಸಿಂಹಪ್ಪ, ಗೌರವಾಧ್ಯಕ್ಷ ಡಿ.ಎನ್.ರಘುನಾಥ್, ಹಿರಿಯ ಕ್ರೀಡಾಪಟುಗಳಾದ ಅಪ್ಪಣ್ಣ, ಬಂಗಾರಪ್ಪ, ಮಂಜುನಾಥ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.