Bagepalli : ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (First Grade College) ಸೋಮವಾರ ಹಿರಿಯ ಸ್ವಾತಂತ್ರ ಹೋರಾಟಗಾರ, ಶಿಕ್ಷಣ ತಜ್ಞ, ಪದ್ಮಭೂಷಣ ಡಾ.ಎಚ್.ನರಸಿಂಹಯ್ಯನವರ (Dr. H Narasimhaiah) 17ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಏರ್ಪಡಿಸಿದ್ದ ‘ಡಾ.ಎಚ್‌ಎನ್-ಒಂದು ನೆನಪು’ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ನಾರಾಯಣ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ.ವೈ.ನಾರಾಯಣ ” : ಗಡಿ ಭಾಗದ ಶೈಕ್ಷಣಿಕ ಪ್ರಗತಿಗೆ ಕಾರಣಕರ್ತರಾದ ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ ನಿಜವಾದ ಜಗದ ಸಂತರಾಗಿದ್ದರು. ಅಧಿಕಾರಕ್ಕಾಗಿ ಸಿದ್ಧಾಂತಗಳನ್ನು ಎಂದೂ ಬಲಿಕೊಡಲಿಲ್ಲ. ಅವರ ವೈಚಾರಿಕತೆ, ಕೆಲವೊಂದು ಸಂದರ್ಭದಲ್ಲಿ ಅಪಮಾನಗಳನ್ನು ತಂದೊಟ್ಟಿತಾದರೂ ಅವರು ಎಂದೂ ವೈಚಾರಿಕತೆಯನ್ನು ಬಿಟ್ಟುಕೊಡಲಿಲ್ಲ” ಎಂದು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ನಯಾಜ್ ಅಹ್ಮದ್, ಕರ್ನಾಟಕ ರಾಜ್ಯ ವೈಜ್ಞಾನಕ ಸಂಶೋಧನಾ ಪರಿಷತ್ತು ತಾಲ್ಲೂಕು ಅಧ್ಯಕ್ಷ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ಪ್ರಾಧ್ಯಾಪಕರಾದ ಡಾ.ಬಿ.ಎನ್.ಪ್ರಭಾಕರ್, ಪ್ರೊ.ಕೇಶವಮೂರ್ತಿ, ಪ್ರೊ.ಶ್ರೀನಿವಾಸ್, ಪ್ರೊ.ಅನಿಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.