Bagepalli : ತಹಶೀಲ್ದಾರ್ ಪ್ರಶಾಂತ್ ಕೆ.ಪಾಟೀಲ್ ನೇತೃತ್ವದಲ್ಲಿ ಬುಧವಾರ ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ (ಗಡಿದಂ) (Gadidam) ಗ್ರಾಮದ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯದ ಆವರಣದಲ್ಲಿ ಹುಂಡಿ ಎಣಿಕೆ ಕಾರ್ಯ (Hundi Counting) ನಡೆಯಿತು.
ದೇವಾಲಯದ ಅರ್ಚಕ ಕೆ.ಪ್ರಕಾಶರಾವ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ಶ್ರೀನಿವಾಸ ಬಾಬು ಅವರ ಸಮ್ಮುಖದಲ್ಲಿ ಕಂದಾಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಹಾಗೂ ದೇವಾಲಯದ ಸಿಬ್ಬಂದಿ ಹುಂಡಿ ಏಣಿಕೆ ಮಾಡಿದರು. ಈ ಬಾರಿ ₹1,18,000 ಸಂಗ್ರಹವಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ₹3 ಲಕ್ಷ 28 ಸಾವಿರ ಹೆಚ್ಚುವರಿ ಹಣ ಸಂಗ್ರಹವಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.