Bagepalli : ಬಾಗೇಪಲ್ಲಿ ತಾಲ್ಲೂಕಿನ ಐತಿಹಾಸಿಕ ದೇವರಗುಡಿಪಲ್ಲಿ (ಗಡಿದಂ) (Gadidam) ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ಶನಿವಾರ ರಾತ್ರಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ (Laksha Deepotsava) ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರ ಸಮ್ಮುಖದಲ್ಲಿತಹಶೀಲ್ದಾರ್ ಪ್ರಶಾಂತ್ ಕೆ.ಪಾಟೀಲ್ ದೀಪೋತ್ಸವಕ್ಕೆ ಚಾಲನೆ ನೀಡಿದರು.
ದೀಪೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದ ಮುಂದೆ ಮಹಿಳೆಯರು ದೀಪ ಬೆಳಗಿದರು. ದೇವಾಲಯದ ಪ್ರಧಾನ ಅರ್ಚಕ ಪ್ರಕಾಶ್ ರಾವ್ ಹಾಗೂ ಅಶ್ವತ್ಥಪ್ಪ ಸ್ವಾಮಿ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.
