Bagepalli : ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತದ ಪ್ರಯೋಗಾಲಯದ ವಸ್ತು ಪ್ರದರ್ಶನ (Science Exhibition) ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರಿನ ಯುನೈಟೆಡ್ ವೇ ಸಹಾಯಕ ಕಾರ್ಯದರ್ಶಿ ಭಾಸ್ಕರ್ ಮಾತನಾಡಿ, ‘ದಾನಿಗಳ ನೆರವಿನಿಂದ ಸರ್ಕಾರಿ ಶಾಲೆಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ಸ್ಥಾನಕ್ಕೇರಬೇಕು. ಜತೆಗೆ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲಿಸಬೇಕು’ ಎಂದರು.
ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎನ್.ನಾಗರಾಜ್, ಅಮೀರ್ ಜಾನ್ ವಸ್ತು ಪ್ರದರ್ಶನದ ತೀರ್ಪುಗಾರರಾಗಿದ್ದರು. ಉತ್ತಮ ವಿಜ್ಞಾನ ಪ್ರದರ್ಶನ ಮಾಡಿದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಯರಾಮರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ, ತಾಲ್ಲೂಕು ಕ್ಷೇತ್ರ ಸಮನ್ವಾಧಿಕಾರಿ ಆರ್.ವೆಂಕಟರಾಮ್, ಯುನೈಟೆಡ್ ವೇ ಉಪಾಧ್ಯಕ್ಷ ಹಾಗೂ ಮುಖ್ಯಸ್ಥ ಶ್ರೀರಾಮಗೋಪಾಲಸ್ವಾಮಿ, ಶ್ರೀರಾಮ ಆನಂತನಾರಾಯಣ, ಶಿಕ್ಷಣ ಸಂಯೋಜಕರಾದ ರಾಜಣ್ಣ, ಬಾಲರಾಜು, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ವಿ.ಆದಿನಾರಾಯಣ, ಗೂಳೂರು ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್, ಶಿಕ್ಷಕರಾದ ಫಕೃದ್ಧೀನ್, ಕೆ.ವಿ.ಶ್ರೀನಿವಾಸ್, ವಿಜಯ್ ಕುಮಾರ್, ಮನೋಹರ್ ಉಪಸ್ಥಿತರಿದ್ದರು.