Home Bagepalli January ಒಳಗೆ ಸಾಗುವಳಿ ಚೀಟಿಗಳ ವಿತರಣೆ

January ಒಳಗೆ ಸಾಗುವಳಿ ಚೀಟಿಗಳ ವಿತರಣೆ

0

Bagepalli : ಬಾಗೇಪಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕೊತ್ತಕೋಟೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಂಪಲ್ಲಿ ಕ್ರಾಸ್‌ನಲ್ಲಿ (Honampalli Cross) ಬುಧವಾರ ಕುಂದು ಕೊರತೆ ಸಭೆಯನ್ನು (Kundu Korate Sabhe) ಶಾಸಕ ಎಸ್.ಎನ್.ಸುಬ್ಬಾರೆಡ್ಡಿರವರ (S N Subbareddy) ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಗ್ರಾಮಸ್ಥರು 227 ಅಹವಾಲುಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು “ಪಂಚಾಯಿತಿ ವ್ಯಾಪ್ತಿಯ ಕೊತ್ತಕೋಟೆ, ಪೆಸಲಪರ್ತಿ, ರಾಮನೊಡ್ಡಂಪಲ್ಲಿ, ಕೊಲಿಮಿಪಲ್ಲಿ, ಜಿಲ್ಲಾಲಪಲ್ಲಿ ಸೇರಿದಂತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. 2025ರ ಜನವರಿ ತಿಂಗಳ ಒಳಗೆ ಸಾಗುವಳಿ ಚೀಟಿಗಳನ್ನು ವಿತರಿಸಲಾಗುವುದು. ಕಂದಾಯ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2200 ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳನ್ನು ಗುರ್ತಿಸಿ, ಸರ್ಕಾರದಿಂದ ಸಿಗುವ ಯೋಜನೆಗಳ ಆದೇಶ ಪತ್ರಗಳನ್ನು ವಿತರಿಸಲಾಗಿದೆ” ಎಂದು ತಿಳಿಸಿದರು.

ತಹಶೀಲ್ದಾರ್ ಮನೀಷಾ ಎನ್ ಪತ್ರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ರಮೇಶ್, ಕೊತ್ತಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಕೃಷಿ ಸಹಾಯಕ ನಿರ್ದೇಶಕಿ ಜಿ.ಲಕ್ಷ್ಮೀ, ಮುಖಂಡರಾದ ಎಸ್.ಎಸ್.ರಮೇಶಬಾಬು, ಪಿ.ಮಂಜುನಾಥರೆಡ್ಡಿ, ಲಕ್ಷ್ಮೀನರಸಿಂಹಪ್ಪ, ಜಯಪ್ರಕಾಶರೆಡ್ಡಿ, ವಿಷ್ಣುವರ್ಧನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version