Bagepalli : ತಮ್ಮ ಸ್ವಗೃಹದಲ್ಲಿ ಬುಧವಾರ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ (MLA S.N. Subbareddy) ಜನತಾ ದರ್ಶನ (Janata Darshana) ಹಮ್ಮಿಕೊಂಡಿದ್ದರು.
ಆರೋಗ್ಯ, ಶಿಕ್ಷಣಕ್ಕೆ ಅಗತ್ಯ ನೆರವು ಹಾಗೂ ಸರ್ಕಾರಗಳಿಂದ ಬರುವ ಸಾಲ ಸೌಲಭ್ಯ ಕಲ್ಪಿಸುವಂತೆ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲ್ಲೂಕುಗಳ ಜನರು ಜನತಾ ದರ್ಶನದಲ್ಲಿ ಅಹವಾಲುಗಳನ್ನು ಶಾಸಕರಿಗೆ ಸಲ್ಲಿಸಿದರು.
ಗ್ರಾಮಕ್ಕೆ ರಸ್ತೆ, ಕುಡಿಯುವ ನೀರು ಸೇರಿ ಮೂಲ ಸೌಲಭ್ಯಗಳನ್ನು, ಅಂಗವಿಕಲರಿಗೆ ಸರ್ಕಾರ ಗಳಿಂದ ಬರುವ ಸೌಲಭ್ಯಗಳನ್ನು, ತಾಲ್ಲೂಕಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರವೇಶ ಶುಲ್ಕ, ಉನ್ನತ ವ್ಯಾಸಂಗಕ್ಕೆ ಅಗತ್ಯ ನೆರವು ಕಲ್ಪಿಸುವಂತೆ, ವೃದ್ಧರು, ನಿರ್ಗತಿಕರು, ಅಂಗ ವಿಕಲರು, ಗರ್ಭಕೋಶ ತೊಂದರೆ ಇರುವ ಮಹಿಳೆಯರು, ದೃಷ್ಟಿದೋಷ, ಅಫಘಾತಗಳಿಂದ ತೊಂದರೆಗೆ ಒಳಗಾಗಿರುವವರು ಸೇರಿದಂತೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳ ಜನರು ಅಗತ್ಯ ಶಸ್ತ್ರಚಿಕಿತ್ಸೆ, ಚಿಕಿತ್ಸೆ ಕಲ್ಪಿಸುವಂತೆ ಜನರು ಶಾಸಕರಲ್ಲಿ ಮನವಿ ಸಲ್ಲಿಸಿದರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ (MS Ramaiah Memorial Hospital) ಮತ್ತು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ (Sankara Eye Hospital) ಉಚಿತ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಕಾಂಗ್ರೆಸ್ ಉಸ್ತುವಾರಿ ಚಂಪಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಸ್.ರಮೇಶ್ ಬಾಬು, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ವಿ.ಮಂಜುನಾಥ್ ಹಾಗೂ ಅಧಿಕಾರಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿದ್ದರು.