Bagepalli : ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು (Republic Day) ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಉದ್ಘಾಟಿಸಿದರು, ತಹಶೀಲ್ದಾರ್ ವೈ. ರವಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ” ರಾಜ್ಯ ಬಿಜೆಪಿ ಸರ್ಕಾರ ಬಿಜೆಪಿ ಶಾಸಕರಿಗೆ ಹೆಚ್ಚು ಅನುದಾನ ನೀಡಿ ಅಸಮಾನತೆ ಪ್ರದರ್ಶನ ಮಾಡಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಅಂಕಿ-ಅಂಶ ಸಮೇತ ದಾಖಲೆ ಬಿಡುಗಡೆ ಮಾಡಿ ತಾರತಮ್ಯದ ಬಗ್ಗೆ ಜನರಿಗೆ ತಿಳಿಸುತ್ತೇನೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಸಿದ್ದಪ್ಪ, ಪುರಸಭೆ ಮುಖ್ಯಾಧಿಕಾರಿ ಕೆ. ಮಧುಕರ್, ಅಧ್ಯಕ್ಷೆ ರೇಷ್ಮಾಬಾನು, ಉಪಾಧ್ಯಕ್ಷ ಎ. ಶ್ರೀನಿವಾಸ್, ಸ್ಥಾಯಿ ಸಮಿತಿ ಅಧ್ಯಕ್ಷ ಎ. ನಂಜುಂಡಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಆರ್. ಹನುಮಂತರೆಡ್ಡಿ ಉಪಸ್ಥಿತರಿದ್ದರು.