Bagepalli : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನ ವಿಕಾಸ (Jnana Vikasa) ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ತಾಲ್ಲೂಕು ಯೋಜನಾಧಿಕಾರಿ ಬಿ.ಪಿ.ಗಿರೀಶ್ ಮಾತನಾಡಿದರು.
ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸದ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಅವರು ತಿಳಿಸಿದರು.
ಜ್ಞಾನ ವಿಕಾಸ ಯೋಜನೆ ಅಡಿಯಲ್ಲಿ ಜನಜಾಗೃತಿ ಶಿಬಿರಗಳನ್ನು ಹಮ್ಮಿಕೊಂಡು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಸಾಮಾಜಿಕವಾಗಿ ಬೆಳೆಯಲು ಪ್ರೇರೇಪಿಸಲು ವಿವಿಧ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ವಿಕಾರ್ಯಕ್ರಮದಲ್ಲಿ ಜ್ಞಾನವಿಕಾಸ ತಾಲ್ಲೂಕು ಸಮನ್ವಾಯಾಧಿಕಾರಿ ಕೆ.ಆರ್.ಮಂಜುಳಾ, ಆರೋಗ್ಯ ಭಾರತಿ ಸಂಸ್ಥೆಯ ಪ್ರಾಂತೀಯ ಸದಸ್ಯೆ ಮಂಜುಳ ಭೀಮರಾವ್, ಸಂಘದ ಪ್ರತಿನಿಧಿ ಮಂಜುಳಾ, ಮೇಲ್ವಿಚಾರಕಿ ಜಯಲಕ್ಷ್ಮಿ ಹಾಗೂ ಸೇವಾಪ್ರತಿನಿಧಿಗಳು ಇದ್ದರು.