Bagepalli : ಡಿಸೆಂಬರ್ 7ರಂದು ಹಾಸನದಲ್ಲಿ ನಡೆದ ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಹಂತದ ಬಾಲ್ ಬ್ಯಾಡ್ಮಿಂಟನ್ (Ball Badminton) ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಗೇಪಲ್ಲಿ ತಾಲ್ಲೂಕಿನ ಮಾರ್ಗಾನುಕುಂಟೆ ಗಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲ್ಲೂಕಿನ ಹಿರಿಮೆ ಹೆಚ್ಚಿಸಿದ್ದಾರೆ. ಅತ್ಯುತ್ತಮ ಪ್ರದರ್ಶನ ನೀಡಿದ ಶಾಲೆಯ ವಿದ್ಯಾರ್ಥಿ ದಿವ್ಯ ರಾಷ್ಟ್ರಮಟ್ಟಕ್ಕೆ (National Level) ಆಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನಡೆದ ವಿಭಾಗೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಶಾಲೆಯ ವಿದ್ಯಾರ್ಥಿನಿ ದಿವ್ಯ, ಅಶ್ವಿನಿ, ಮೌನಿಕ, ವರಲಕ್ಷ್ಮಿ, ನಂದಿನಿ ಉತ್ತಮ ಪ್ರದರ್ಶನ ಮಾಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.

[…] […]