Bagepalli : ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ (Union Budget) ಕೃಷಿ ಕೂಲಿಕಾರ್ಮಿಕರ, ಸಾಮಾನ್ಯರ ವಿರೋಧಿ ಆಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಹಾಗೂ ಪ್ರಜಾ ಸಂಘರ್ಷ ಸಮಿತಿ (Praja Sangharsha Samiti – PSS) ಜಿಲ್ಲಾ ಸಂಚಾಲಕ ಜಿ.ವಿ.ಶ್ರೀರಾಮರೆಡ್ಡಿ (G. V. Sreeramareddy) ನೇತೃತ್ವದಲ್ಲಿ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಿಂದ ಜನ ಸಾಮಾನ್ಯರಿಗೆ, ಕೃಷಿಕೂಲಿ ಕಾರ್ಮಿಕರಿಗೆ ಯಾವುದೇ ಪ್ರಯೋಜನ ಇಲ್ಲ. ಶಿಕ್ಷಣ, ಉದ್ಯೋಗ, ಆರೋಗ್ಯ ಸೇರಿದಂತೆ ಕನಿಷ್ಠ ಮೂಲ ಸೌಲಭ್ಯ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆ ಆಗಿಲ್ಲ ಎಂದು ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಆರೋಪಿಸಿದರು.
ಪಿಎಸ್‌ಎಸ್‌ನ ಜಿಲ್ಲಾ ಸಂಘಟನಾ ಸಂಚಾಲಕ ಗೋಪಾಲಕೃಷ್ಣ, ಮುಖಂಡರಾದ ಚನ್ನರಾಯಪ್ಪ, ಜಿ.ಎಂ.ರಾಮಕೃಷ್ಣಪ್ಪ, ಜುಬೇರ್ ಅಹಮದ್, ಟಿ.ಎಲ್.ವೆಂಕಟೇಶ್, ಎಲ್.ವೆಂಕಟೇಶ್, ಆರ್ ಚಂದ್ರಶೇಖರರೆಡ್ಡಿ, ರಾಮಾಂಜೀ, ಚಲಪತಿ, ಭಾಷಾಸಾಬ್, ಅಶ್ವಥ್ಥರೆಡ್ಡಿ, ಬಿ.ಕೆ.ಮಂಜುನಾಥ್, ಜೈನಾಭೀ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.