Friday, March 24, 2023
HomeBagepalliಅಮೃತ ಗ್ರಾಮೀಣ ವಸತಿ ಯೋಜನೆಯಡಿ ಅರ್ಜಿ ಸ್ವೀಕಾರ

ಅಮೃತ ಗ್ರಾಮೀಣ ವಸತಿ ಯೋಜನೆಯಡಿ ಅರ್ಜಿ ಸ್ವೀಕಾರ

- Advertisement -
- Advertisement -
- Advertisement -
- Advertisement -

Bagepalli : ಅಮೃತ ಗ್ರಾಮೀಣ ವಸತಿ ಯೋಜನೆಯಡಿಯಲ್ಲಿ (Amrutha Grameena Vasati Yojane) ಬಾಗೇಪಲ್ಲಿ ತಾಲ್ಲೂಕಿನ ಕಾನಗಮಾಕಲಪಲ್ಲಿ ಗ್ರಾಮದಲ್ಲಿ ಅರ್ಜಿಗಳ ಸ್ವೀಕಾರ ಹಾಗೂ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ (S N Subbareddy) ಅವರು ಜನರ ಅಹವಾಲುಗಳನ್ನು ಸ್ವೀಕರಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಸುತ್ತಮುತ್ತಲಿನ 300 ಕ್ಕೂ ಹೆಚ್ಚು ಗ್ರಾಮಸ್ಥರು ಶಾಸರಿಗೆ ಅರ್ಜಿಗಳನ್ನು ನೀಡಿದರು. ಕೆಲ ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹಾರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು “ತಾಲ್ಲೂಕಿನಲ್ಲಿ ಅಮೃತ ಯೋಜನೆ ಅಡಿಯಲ್ಲಿ ಅನಿಯಮಿತ ಮನೆಗಳನ್ನು ನೀಡುವ ಅವಕಾಶ ನನಗೆ ಸಿಕ್ಕಿದ್ದು ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 800 ಮನೆಗಳನ್ನು ನೀಡುವ ಗುರಿ ಹೊಂದಿದ್ದೇವೆ . ಲಂಚ ನೀಡದೇ ಆರೋಗ್ಯ, ಮಕ್ಕಳ ಶಿಕ್ಷಣ, ರಸ್ತೆ, ನೀರು, ಮನೆ-ನಿವೇಶನ, ಪಿಂಚಿಣಿ, ವೇತನಗಳು ಹಾಗೂ ಗ್ರಾಮಗಳ ಸಮಸ್ಯೆಗಳೇನೇ ಇದ್ದರೂ, ನನ್ನ ಗಮನಕ್ಕೆ ತಂದರೆ ನಾನು ಬಗೆಹರಿಸುತ್ತೇನೆ.ಸೌಲಭ್ಯಗಳನ್ನು ಶಾಸಕ ಒಗದಿಸಿಲ್ಲ ಎಂದಾದರೆ, ಅವರ ಬೆನ್ನುಬಿದ್ದು ಕೆಲಸ ಮಾಡಿಸಿಕೊಳ್ಳಬೇಕು. ಹಕ್ಕಿನಿಂದ ಸರ್ಕಾರಿ ಸೌಲಭ್ಯಗಳನ್ನು ಜನರು ಕೇಳಿ ಪಡೆದುಕೊಳ್ಳಬೇಕು ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವೈ. ರವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಕೇತ ಆರ್. ಶಿವಪ್ಪ, ಉಪಾಧ್ಯಕ್ಷೆ ಹೇಮಾವತಿರವಿ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಚಿನ್ನಕೈವಾರಮಯ್ಯ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ವಿ.ಮಂಜುನಾಥ್, ತಾಲ್ಲೂಕು ಸಾಕ್ಷರತಾ ಅಧಿಕಾರಿ ಎನ್.ಶಿವಪ್ಪ ಭಾಗವಹಿಸಿದರು.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!