Bagepalli : ಭಾನುವಾರ ಜಿಲ್ಲಾಧಿಕಾರಿ ಎನ್. ಎಂ. ನಾಗರಾಜು (N M Nagaraj) ಬಾಗೇಪಲ್ಲಿ ಪಟ್ಟಣದ 10, 11, 12 ಹಾಗೂ 13ನೇ ವಾರ್ಡ್‌ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಷ್ಕರಣೆ ಹಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು “ಜಿಲ್ಲೆಯಾದ್ಯಂತ ನವೆಂಬರ್ 9 ರಿಂದ ಮತದಾರರ ಪಟ್ಟಿ ಪರಿಷ್ಕರಣೆ (Voter List Revision) ನಡೆಯುತ್ತಿದ್ದು ಈಗಾಗಲೇ ಕರಡು ಮತದಾರರ ಪಟ್ಟಿ ಜಿಲ್ಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಹೊಸದಾಗಿ ಮತದಾರ ಸೇರ್ಪಡೆಗೆ ನಮೂನೆ 6, ಮತದಾರರ ಗುರುತಿನ ಚೀಟಿಗೆ ಆಧಾರ ಸಂಖ್ಯೆ ಅಥವಾ ಇತರೆ ದಾಖಲೆಗಳ ಜೋಡಣೆ ಮಾಡಲು ನಮೂನೆ 6ಬಿ, ಮತದಾರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದು ಹಾಕಲು ನಮೂನೆ 7ಅನ್ನು, ಮತದಾರರ ಪಟ್ಟಿಯಲ್ಲಿನ ತಿದ್ದುಪಡಿ, ಬದಲಿ ಗುರುತಿನ ಚೀಟಿ, ಮತದಾರರು ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಅಥವಾ ಒಂದೇ ವಿಧಾನಸಭಾ ಕ್ಷೇತ್ರದಲ್ಲಿರುವ ಭಾಗಕ್ಕೆ ಸ್ಥಳಾಂತರಕ್ಕಾಗಿ ನಮೂನೆ 8ರ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಜನರು ತಮ್ಮ ಹೆಸರು ಇರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಮತಗಟ್ಟೆಯ ಅಧಿಕಾರಿಗಳಿಗೆ ಅಗತ್ಯ ದಾಖಲೆ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಜನರು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹೊಸ ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಇತ್ಯಾದಿ, ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಸಿ ಗರುಡ ಆ್ಯಪ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ತೋರಬಾರದು. ಪ್ರತಿ ಮನೆಗೂ ಭೇಟಿ ನೀಡಿ ಸರ್ವೆ ಮಾಡಿ, ನಿಖರ ಮಾಹಿತಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ತಹಶಿಲ್ದಾರ್ ವೈ. ರವಿ, ಗ್ರೇಡ್ 2 ತಹಶೀಲ್ದಾರ್ ವಿ. ಸುಬ್ರಮಣ್ಯ, ಪುರಸಭೆ ಮುಖ್ಯಾಧಿಕಾರಿ ಕೆ. ಮಧುಕರ್, ಅಧಿಕಾರಿ ಅಥಾವುಲ್ಲಾ ,ಮತಗಟ್ಟೆಯ ಅಧಿಕಾರಿಗಳಾದ ಸತ್ಯನಾರಾಯಣ, ಒಬೇದುಲ್ಲಾ, ಮತ್ತಿತರರು ಉಪಸ್ಥಿತರಿದ್ಧರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur