Chikkaballapur : ತ್ಯಾಗ, ಬಲಿದಾನದ ಸಂಕೇತವಾದ ಈದ್–ಉಲ್–ಅದಾ (Bakrid) ಹಬ್ಬವನ್ನು ಜಿಲ್ಲೆಯಾದ್ಯಂತ ಮುಸ್ಲಿಮರು ಸೋಮವಾರ ಶ್ರದ್ಧಾಭಕ್ತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಮಸೀದಿಯಿಂದ ಮೆರವಣಿಗೆ ಹೊರಟು ಬಜಾರ್ ರಸ್ತೆ, ಗಂಗಮ್ಮನಗುಡಿ, ಎಂ.ಜಿ.ರಸ್ತೆ ಮಾರ್ಗವಾಗಿ ಸಾಗಿ ಪ್ರಶಾಂತ್‌ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಚಿಂತಾಮಣಿ :
ಚಿಂತಾಮಣಿ ಸೋಮವಾರ ನಗರ ಹಾಗೂ ತಾಲ್ಲೂಕಿನಾದ್ಯಂತ ಮುಸ್ಲಿಮರು ಸಡಗರ, ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.
ಶಿಡ್ಲಘಟ್ಟ :
ಶಿಡ್ಲಘಟ್ಟ ನಗರದ ಐತಿಹಾಸಿಕ ಜಾಮೀಯಾ ಮಸೀದಿ ಬಳಿ ಜಮಾಯಿಸಿ ಮುಸ್ಲಿಮರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ಗೌರಿಬಿದನೂರು :
ಗೌರಿಬಿದನೂರು ನಗರದ ಉಡಮಲೋಡು ಬಳಿ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬಾಗೇಪಲ್ಲಿ :
ಬಾಗೇಪಲ್ಲಿ ಪಟ್ಟಣದ ಜಾಮೀಯಾ, ಫಾರೂಕ್, ಕಮರ್, ನೂರಾನಿ, ಕೊತ್ತಪಲ್ಲಿ ರಸ್ತೆ ಮಸೀದಿ ಸೇರಿದಂತೆ 18 ಮಸೀದಿಗಳಿಂದ ಮೆರವಣಿಗೆ ಹೊರಟು ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.