Home News Chikkaballapur ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಅಲ್ಲದೆ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ (Bakrid Celebration) ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಮಸೀದಿಯಿಂದ ಮೆರವಣಿಗೆ ಹೊರಟು ಬಜಾರ್ ರಸ್ತೆ, ಗಂಗಮ್ಮನಗುಡಿ, ಎಂ.ಜಿ.ರಸ್ತೆ ಮಾರ್ಗವಾಗಿ ಸಾಗಿ ಪ್ರಶಾಂತ್‌ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬಾಗೇಪಲ್ಲಿ

Bakrid Celebration Bagepalli

ಬಾಗೇಪಲ್ಲಿ ಪಟ್ಟಣದ ಹಿರಿಯ ಜಾಮೀಯಾ ಮಸೀದಿ ಸೇರಿದಂತೆ ವಿವಿಧ ಮಸೀದಿ ಗಳಿಂದ ಹೊರಟ ಮುಸ್ಲಿಂರು ಪಟ್ಟಣದ ಮುಖ್ಯರಸ್ತೆಯ ಮೂಲಕ ಮೆರವಣಿಗೆ ಮೂಲಕ ಈದ್ಗಾ ಮೈದಾನದಲ್ಲಿ ಜಮಾಯಿಸಿ ಪ್ರಾರ್ಥನೆ ಮಾಡಿದರು.

ಶಿಡ್ಲಘಟ್ಟ

ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು.

ಗೌರಿಬಿದನೂರು

ಗೌರಿಬಿದನೂರು ನಗರದ ಹೊರವಲಯದ ಉಡುಮಲೋಡು ಬಳಿ ಇರುವ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಬಕ್ರೀದ್ ಹಬ್ಬದ ಅಂಗವಾಗಿ ಪ್ರಾರ್ಥನೆ ಸಲ್ಲಿಸಿದರು.

ಚಿಂತಾಮಣಿ

ಚಿಂತಾಮಣಿ ನಗರ ಹಾಗೂ ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಗುರುವಾರ ದೊಡ್ಡಪೇಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಜಮಾವಣೆಗೊಂಡು ಮೆರವಣಿಗೆಯು ನಗರದ ಅಜಾದ ಚೌಕ, ಪಿಸಿಆರ್ ಕಾಂಪ್ಲೆಕ್ಸ್, ಎಂ.ಜಿ.ರಸ್ತೆ, ಬಾಗೇಪಲ್ಲಿ ವೃತ್ತದ ಮೂಲಕ ಈದ್ಗಾ ಮೈದಾನ ತಲುಪಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version