Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ( Backward Classes Welfare Department) (BCWD) ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (Hostels) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು www.shp.karnataka.gov.in ನಲ್ಲಿ ಅಕ್ಟೋಬರ್ 11 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in, ತಾಂತ್ರಿಕ ತೊಂದರೆ ಆದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮೂಲಕ ಸಂಪರ್ಕಿಸಬಹುದು.
ಸಹಾಯವಾಣಿ 080-8050370006, 08156-277053 ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ರಾಮಕೃಷ್ಣಪ್ಪ ತಿಳಿಸಿದ್ದಾರೆ.