Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್-ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (BCWD Hostel) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ, ವರ್ಗ ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ (Application) ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ: www.shp.karnataka.gov.in ಸಹಾಯವಾಣಿ ಸಂಖ್ಯೆ 080-8050370006, ದೂರವಾಣಿ ಸಂಖ್ಯೆ: 08156-277053, ತಾಂತ್ರಿಕ ದೋಷದ ಇಮೇಲ್ bcwd.hostels@karnataka.gov.in ಗೆ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ಅನ್ನು ಸಂಪರ್ಕಿಸಿಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಮಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಡಿಸೆಂಬರ್ 22 ರೊಳಗೆ ಸಲ್ಲಿಸಬೇಕು.