22.4 C
Bengaluru
Thursday, November 7, 2024

ಪಾಕಿಸ್ತಾನದ ಜಿನ್ನಾನ ಪಾತ್ರವನ್ನು ನರೇಂದ್ರ ಮೋದಿ ನಿರ್ವಹಿಸುತ್ತಿದ್ದಾರೆ : ಎಂ.ವೀರಪ್ಪ ಮೊಯಿಲಿ

- Advertisement -
- Advertisement -

Chikkaballapur : ರಾಹುಲ್ ಗಾಂಧಿ (Rahul Gandi) ಅವರ ಭಾರತ ಜೋಡೊ ಯಾತ್ರೆಗೆ (Bharath Jodo Yatra) ಒಂದು ವರ್ಷ (Anniversery) ಸಂದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ (Congress) ಪಕ್ಷವು ಗುರುವಾರ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಈ ವೇಳೆ ಮಾತನಾಡಿದ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ” BJPಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಜಾತಿ, ಧರ್ಮ, ಪ್ರಾದೇಶಿಕತೆ ಹೆಸರಿನಲ್ಲಿ ವಿಭಜಿಸಿ ದೇಶದ ಏಕತೆ ಮತ್ತು ಸಾಮರಸ್ಯಕ್ಕೆ ಭಂಗ ತಂದಿದ್ದಾರೆ. ಮೋದಿ ಮತ್ತು ಬಿಜೆಪಿಯವರಿಗೆ ಇತಿಹಾಸವೇ ಗೊತ್ತಿಲ್ಲ. ದೇಶಕ್ಕೆ ಇಂಡಿಯಾ ಎಂದು ಹೆಸರು ಇಡಬಾರದು ಎಂದು ವಿರೋಧಿಸಿದ್ದು ಪಾಕಿಸ್ತಾನದ ಜನಕ ಮಹಮ್ಮದ್ ಆಲಿ ಜಿನ್ನಾ (Muhammad Ali Jinnah) . ಈಗ ಜಿನ್ನಾನ ಪಾತ್ರವನ್ನು ನರೇಂದ್ರ ಮೋದಿ ನಿರ್ವಹಿಸುತ್ತಿದ್ದಾರೆ. ಇದು ದೇಶ ಪ್ರೇಮದ ಸಂಕೇತವೊ ದೇಶ ದ್ರೋಹದ ಸಂಕೇತವೊ ಆಲೋಚಿಸಬೇಕು. ದೇಶದಲ್ಲಿ ಐಕ್ಯ ಭಾವನೆ ಮೂಡಬೇಕು ಎನ್ನುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗ ರಾಹುಲ್ ಗಾಂಧಿ ಅವರು ಭಾರತ ಜೋಡೊ ಯಾತ್ರೆ ನಡೆಸಿದರು. 165 ದಿನ 4 ಸಾವಿರ ಕಿ.ಮೀ ನಡೆದರು. ದೇಶದ ಇತಿಹಾಸದಲ್ಲಿ ಇದು ದೊಡ್ಡ ಪಾದಯಾತ್ರೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ್ ಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಅಧ್ಯಕ್ಷ ಎಂ.ಆಂಜನಪ್ಪ, ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ, ಶಿವಾನಂದ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಯಲುವಳ್ಳಿ ರಮೇಶ್, ನಗರಸಭೆ ಸದಸ್ಯ ರಫೀಕ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಯಾಸ್ಮಿನ್ ತಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಮುದಾಸೀರ್, ಸಹನಾ ರಾಜೀವ್ ಗೌಡ, ಲಕ್ಷ್ಮಿನಾರಾಯಣ್, ಎಂ.ಜಯರಾಂ, ನಾರಾಯಣಸ್ವಾಮಿ, ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!