ರಾಜ್ಯ ಮಟ್ಟದ BJP ಗ್ರಾಮ ಪರಿಕ್ರಮ ಅಭಿಯಾನ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ದಿಬ್ಬೂರು ಗ್ರಾಮದಲ್ಲಿ ಸೋಮವಾರ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಮಟ್ಟದ ಗ್ರಾಮ ಪರಿಕ್ರಮ ಅಭಿಯಾನವನ್ನು (Gram Parakram Abhiyan) ಹಮ್ಮಿಕೊಳ್ಳಾಲಾಗಿತ್ತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳಾಗಿದ್ದು ರೈತರ ಕಲ್ಯಾಣಕ್ಕೆ ಒಂದೇ ಒಂದು ಯೋಜನೆ ರೂಪಿಸಿಲ್ಲ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು ಬಡವರ, ದಲಿತರ ಹಾಗೂ ಜನ ವಿರೋಧಿ ಸರ್ಕಾರದ ಆರ್ಥಿಕ ಸ್ಥಿತಿ ಅಧೋಗತಿಯಲ್ಲಿದೆ. ರಾಜ್ಯದಲ್ಲಿ ಶೇ 50ರಷ್ಟು ಕಮಿಷನ್ ಸರ್ಕಾರ ಇದೆ ಅಂತ ಅವರದೇ ಪಕ್ಷದ ನಾಯಕರು ಹೇಳುತ್ತಿದ್ದಾರೆ” ಎಂದು ಟೀಕಿಸಿದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು,ಮಾಜಿ ಸಚಿವ ಡಾ ಕೆ ಸುಧಾಕರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರುದ್ರೇಶ್, ಸೀಕಲ್ ರಾಮಚಂದ್ರಗೌಡ, ರಾಜಶೇಖರ್, ಮಾಜಿ ಶಾಸಕ ಎಂ.ರಾಜಣ್ಣ, ಮರಳುಕುಂಟೆ ಕೃಷ್ಣಮೂರ್ತಿ, ಪಿ.ಎನ್.ಕೇಶವರೆಡ್ಡಿ, ಕೆ.ವಿ.ನಾಗರಾಜ್, ಕೆ.ವಿ.ನವೀನ್ ಕಿರಣ್, ಆನಂದರೆಡ್ಡಿ ಬಾಬು ಪಾಲ್ಗೊಂಡಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!