Chikkaballapur : ಚಿಕ್ಕಬಳ್ಳಾಪುರ ಬಿಜೆಪಿ (BJP Members) ಜಿಲ್ಲಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಮುಖಂಡರು ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸೇರಿ ಕಾಂಗ್ರೆಸ್ (Congress) ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ (Protest) ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ “ಕಾಂಗ್ರೆಸ್ ಮುಖಂಡ ಧೀರಜ್ ಸಾಹು ಮನೆಯಲ್ಲಿ ₹ 300 ಕೋಟಿ ಕಪ್ಪು ಹಣ ದೊರೆತ್ತಿರುವುದು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರವನ್ನು ತೋರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆಲಂಗಾಣ ಚುನಾವಣೆ ವೇಳೆ ಹಣದ ಹೊಳೆ ಹರಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಜನಪರವಾದ ಯೋಜನೆಗಳನ್ನು ಹಿಂಪಡೆದಿದೆ. ಎಲ್ಲ ಬೆಲೆಗಳು ಹೆಚ್ಚಳವಾಗಿದ್ದು ಜನಸಾಮಾನ್ಯರ ಬದುಕು ಕಷ್ಟವಾಗಿದೆ. ಅಲ್ಪಸಂಖ್ಯಾತರಿಗೆ ₹ 10 ಸಾವಿರ ಕೋಟಿ ನೀಡಿದ್ದಾರೆ. ಜಾತಿಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಸಮಾಜವನ್ನು ವಿಭಜಿಸುತ್ತಿದೆ” ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ್, ನಗರದ ಘಟಕದ ಅಧ್ಯಕ್ಷ ಆನಂದ್, ಬಾಗೇಪಲ್ಲಿ ಬಿಜೆಪಿ ಮುಖಂಡ ಸಿ.ಮುನಿರಾಜು, ಮಾಜಿ ಶಾಸಕ ಎಂ.ರಾಜಣ್ಣ, ರಮೇಶ್ ಬಾಯಿರಿ, ಮುಖಂಡ ಕೆ.ವಿ.ನಾಗರಾಜ್, ದೇವಸ್ಥಾನ ಹೊಸಹಳ್ಳಿ ರಾಮಣ್ಣ, ಬೈರೇಗೌಡ ಮತ್ತಿತರರು ಪಾಲ್ಗೊಂಡಿದ್ದರು.