Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ BJP ವತಿಯಿಂದ October 30 ರಂದು ಕಲಬುರ್ಗಿ (Kalaburagi) ಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ (OBC Morcha) ಪೂರ್ವಭಾವಿ ಸಭೆ (Preliminary Meeting) ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) “208 ಜಾತಿ ಮತ್ತು 675 ಉಪಜಾತಿಗಳು ರಾಜ್ಯದಲ್ಲಿದ್ದು ಈ ಹಿಂದುಳಿದ ವರ್ಗಗಳ ಸಮಾವೇಶವು ರಾಜ್ಯ ರಾಜಕಾರಣಕ್ಕೆ ಹೊಸ ಸಂದೇಶ ರವಾನಿಸಿ ಬಿಜೆಪಿ ಹಾಗೂ ಹಿಂದುಳಿದ ವರ್ಗಗಳಿಗೆ ಹೊಸಶಕ್ತಿ ತುಂಬಲಿದೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದ BJP ಸರ್ಕಾರ ಜನರಿಗೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು ನರೇಂದ್ರ ಮೋದಿ (Prime Minister Modi) ಅವರು ವಿಶ್ವನಾಯಕರಾಗಿದ್ದಾರೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ (M. T. B. Nagaraj), ಸಚಿವ ಮುನಿರತ್ನ (Munirathna), ಸಂಸದ ಪಿ.ಸಿ.ಮೋಹನ್ (P. C. Mohan), ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas), ಬಿಜೆಪಿ ಮುಖಂಡರಾದ ತಾರಾ ಅನುರಾಧಾ (Tara), ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋವಿಂದರಾಜ್, ಕಿರಣ್, ಡಾ.ಜಿ.ವಿ.ಮಂಜುನಾಥ್, ಜಿಲ್ಲಾ ಮತ್ತು ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.