ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ಸಿದ್ದರಾಮಯ್ಯ (Siddaramaih) ರಾಜೀನಾಮೆಗೆ ಒತ್ತಾಯಿಸಿ BJP ಕಾರ್ಯಕರ್ತರು ಮಾನವ ಸರಪಳಿ ನಿರ್ಮಿ,ಸಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ (Protest) ನಡೆಸಿದರು.

‘ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಲೇಬೇಕು. ದಲಿತ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ, ಎಲ್ಲಿಯವರೆಗೆ ಹೋರಾಟ ಸಿದ್ದರಾಮಯ್ಯ ತೊಲಗುವವರೆಗೆ ಹೋರಾಟ’ ಎಂದು ಕಾರ್ಯಕರ್ತರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ “ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನೈತಿಕತೆ ಇದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು MUDA ಹಗರಣದ ವಿಚಾರವಾಗಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮೈಸೂರು ಪಾದಯಾತ್ರೆ ಸೇರಿದಂತೆ ವಿವಿಧ ಹೋರಾಟಗಳನ್ನು ನಡೆಸಿದೆ. ಇದು ಬಿಜೆಪಿಗೆ ದೊರೆತ ಗೆಲುವು” ಎಂದು ಹೇಳಿದರು.

ಮುಖಂಡ ಸೀಕಲ್ ಆನಂದಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಮರಳುಕುಂಟೆ ಕೃಷ್ಣಮೂರ್ತಿ, ಸುರೇಂದ್ರ ಗೌಡ, ಎಸ್.ಆರ್.ಎಸ್.ದೇವರಾಜ್, ಬಾಲಕುಂಟಹಳ್ಳಿ ಗಂಗಾಧರ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!