Chikkaballapur : ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ (Former Speaker K R Ramesh Kumar) ಅವರು ಬೆಳಗಾವಿ ಅಧಿವೇಶನದಲ್ಲಿ ಅತ್ಯಾಚಾರ ಕುರಿತು ನೀಡಿರುವ ಹೇಳಿಕೆ ಖಂಡಿಸಿ BJP ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಶನಿವಾರ ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟಿಸಿದರು.
ಬಿಜೆಪಿ ಮಹಿಳಾ ಮೋರ್ಚಾ (BJP Mahila Morcha) ದ ಜಿಲ್ಲಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್ ಮಾತನಾಡಿ “ರಮೇಶ್ ಕುಮಾರ್ ಹೆಣ್ಣುಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿ ವಿಕೃತಿ ಮೆರೆದಿದ್ದಾರೆ, ಯಾವುದೇ ವಿಚಾರಕ್ಕೆ ಮಾತನಾಡುವಾಗಲೂ ಮಹಿಳೆಯರ ಕುರಿತಾಗಿ ಹೇಳಿಕೆ ನೀಡುತ್ತಾರೆ ಇಂತಹ ಅವರ ಹೇಳಿಕೆಯನ್ನು ಮಹಿಳಾ ಮೋರ್ಚಾ ಖಂಡಿಸುತ್ತದೆ. ಬಹಿರಂಗವಾಗಿ ಹೆಣ್ಣು ಮಕ್ಕಳ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.
ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಉಪಾಧ್ಯಕ್ಷೆ ಕಲಾ ನಾಗರಾಜ್, ಮಲ್ಲಿಕಾ ಗೌಡ, ಪ್ರೇಮಲೀಲಾ, ಸುಮಿತ್ರಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.