Chikkaballapur :
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಾಗೂ ಕೋಲ್ಹಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ವಿಷಯಕ್ಕೆ ಸಂಭಂದಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕನ್ನಡ ಪರ ಸಂಘಟನೆಗಳು MES ಹಾಗು ಶಿವಸೇನೆಯ ಪುಂಡಾಟಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದವು.
ಚಿಕ್ಕಬಳ್ಳಾಪುರ ನಗರದ ಬಲಮುರಿ ಗಣಪತಿ ವೃತ್ತದ ಸಂತೆ ಮಾರ್ಕೆಟ್ ಸರ್ಕಲ್ ನಿಂದ ಬಿ.ಬಿ ರಸ್ತೆ ಮಾರ್ಗವಾಗಿ ಶಿಡ್ಲಘಟ್ಟ ವೃತ್ತದಲ್ಲಿ ರೈತಪರ ಹಾಗೂ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಮೆರವಣಿಗೆ ನಡೆಸಿ ಎಂ.ಇ.ಎಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದರು. ಹಾನಿಗೊಳಗಾದ ಸರ್ಕಾರದ ಆಸ್ತಿ ಪಾಸ್ತಿ ಕಿಡಿಕೇಡಿಗಳಿಂದಲೇ ಮುಟ್ಟುಗೋಲು ಹಾಕಿಕೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಬಾಗೇಪಲ್ಲಿ
Bagepalli : MES ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಬಾಗೇಪಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಪದಾಧಿಕಾರಿಗಳು ಪ್ರತಿಭಟನೆ ಮಾಡಿದರು. ಎಂಇಎಸ್, ಶಿವಸೇನಾ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಪಟ್ಟಣದ ಪುರಸಭೆ ಮುಂಭಾಗ ದಿಂದ ತಾಲ್ಲೂಕು ಕಚೇರಿಯ ವರೆಗೆ ಮೆರವಣಿಗೆ ನಡೆಸಿ ಗ್ರೇಡ್-2 ತಹಶೀಲ್ದಾರ್ ಸುಬ್ರಮಣ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸೋಮವಾರ ತಾಲ್ಲೂಕು ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಎಂಇಎಸ್ ಮತ್ತು ಶಿವಸೇನಾ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಎಂದು ಆಗ್ರಹಿಸಿ ತಹಶೀಲ್ದಾರ್ ಡಿ.ಎ.ದಿವಾಕರ್ ರವರಿಗೆ ಮನವಿ ಪತ್ರ ನೀಡಿದರು.