Chintamani : ಚಿಂತಾಮಣಿ ತಾಲ್ಲೂಕಿನ ಬೆಂಗಳೂರು–ಮದನಪಲ್ಲಿ ರಸ್ತೆಯ ಮುನುಗನಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ಟ್ರ್ಯಾಕ್ಟರ್ ಮತ್ತು ಖಾಸಗಿ ಬಸ್ ಮತ್ತು ಟ್ರಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ (Bus Tractor Accident) ಟ್ರಾಕ್ಟರ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಚೊಕ್ಕಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುವ ನೌಕರರನ್ನು ಶುಕ್ರವಾರ ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಮುನುಗನಹಳ್ಳಿ ಗೇಟ್ ಬಳಿ ಮಣ್ಣು ತುಂಬಿಕೊಂಡು ಚಲಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಸಮಯದಲ್ಲಿ ಟ್ರ್ಯಾಕ್ಟರ್ ಟ್ರಾಲಿಗೆ ಗುದ್ದಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.