Chikkaballapur : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ, ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿಗಳನ್ನು (BCWD Army Training Application) ಆಹ್ವಾನಿಸಲಾಗಿದೆ.
July 10 ರೊಳಗೆ ವೆಬ್‌ಸೈಟ್ https://bcwd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಗಳು ಯಾವುದಾದರು ಒಂದು ಜಿಲ್ಲೆಯನ್ನು ಮಾತ್ರ ತರಬೇತಿಗಾಗಿ ಆಯ್ಕೆ ಮಾಡಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದಕ್ಷಿಣ ಕನ್ನಡ ಜಿಲ್ಲೆ 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ ಜಿಲ್ಲೆ 08382-226589 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತೇಜಾನಂದರೆಡ್ಡಿ ತಿಳಿಸಿದ್ದಾರೆ.
