Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಕ್ಯಾನ್ಸರ್ ಕುರಿತಂತೆ ಭಯ ಹೋಗಲಾಡಿಸುವ ಹಾಗೂ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ ಮಾತನಾಡಿ, ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿದಲ್ಲಿ ರೋಗವನ್ನು ಸುಲಭವಾಗಿ ವಾಸಿ ಮಾಡಬಹುದಾಗಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಒಂದು ಗಂಟೆ ವಾಕಿಂಗ್ ಮಾಡಬೇಕು. ಕ್ಯಾನ್ಸರ್ ಪೀಡಿತರಲ್ಲಿ ಹಲವರು ಆತ್ಮವಿಶ್ವಾಸ ಕಳೆದುಕೊಂಡು, ತಮ್ಮ ಜೀವನ ಅಂತ್ಯವಾಯಿತು ಅಂದುಕೊಳ್ಳುತ್ತಾರೆ. ಆದ್ದರಿಂದ ಕ್ಯಾನ್ಸರ್ ಕಾಯಿಲೆ ಬಗ್ಗೆ ಜನರಲ್ಲಿನ ಭಯವನ್ನು ಹೋಗಲಾಡಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕೂಡ ಸಾಮಾನ್ಯ ಕಾಯಿಲೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ಮನೋಹರ್, ಮಹಿತ ಟ್ರಸ್ಟ್ ಅಧಿಕಾರಿಗಳಾದ ಸ್ವರೂಪ ಮತ್ತು ಕವಿತಾ, ಎನ್.ಸಿ.ಡಿ ವೈದ್ಯರಾದ ಡಾ. ಸ್ವಾತಿ ಮತ್ತು ಡಾ. ಮಹದೇವ, ಆಯುಷ್ ವೈದ್ಯ ಡಾ.ವಿಜಯಕುಮಾರ್, ನಗರ ಆರೋಗ್ಯ ಕೇಂದ್ರದ ವೈದ್ಯ ಡಾ. ಭರತ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ತಾಲ್ಲೂಕು ಸುರಕ್ಷಣಾಧಿಕಾರಿ ಮುನಿರತ್ನಮ್ಮ, ತಾಲ್ಲೂಕು ಆಶಾ ಮೇಲ್ವಿಚಾರಕಿ ಗೀತಾ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಿಬ್ಬಂದಿ. ನಗರ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದ್ದರು.