
Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿಯ (Grama Panchayat) ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. ಹಿಂದುಳಿದ ವರ್ಗ A ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಯಣ್ಣೂರಿನ ನಾಗರಾಜ್ ಮಾತ್ರವೇ ನಾಮ ಪತ್ರ ಸಲ್ಲಿಸಿದ್ದರು.
ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೃಷಿ ಸಹಾಯಕ ನಿರ್ದೇಶಕಿ ವೀಣಾ ಅವರು ನಾಗರಾಜ್ ಅವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದರೆಂದು ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ನಾಗರಾಜ್ ಅವರನ್ನು ನಿಕಟಪೂರ್ವ ಅಧ್ಯಕ್ಷ ರಾಜಪ್ಪ ಸೇರಿದಂತೆ ಎಲ್ಲ ಸದಸ್ಯರು ಅಭಿನಂದಿಸಿದರು. ಪಿಡಿಒ ತನ್ವೀರ್ ಅಹ್ಮದ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಯಣ್ಣೂರು ಮಂಜುನಾಥ್ ಸೇರಿದಂತೆ ಎಲ್ಲ ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.





Join Telegram







