Chelur : ಚೇಳೂರು ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಶಾಲೆಯ (Karnataka Public School) ಕೊಠಡಿಯೊಂದರಲ್ಲಿ ಮಂಗಳವಾರ ಚಾವಣಿ (Ceiling Collapse) ಕುಸಿದಿದ್ದು 40 ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಶಾಲೆಯ ಕಟ್ಟಡ ನಿರ್ಮಾಣವಾಗಿ 16 ವರ್ಷಗಳು ಕಳೆದಿದ್ದು ಶಾಲೆಯಲ್ಲಿ ಇರುವ ಕೊಠಡಿಗಳು ಸಹ ಅಲ್ಲಲ್ಲಿ ಬಿರುಕು ಬಿಟ್ಟಿವೆ. ಕೊಠಡಿ ನಿರ್ಮಾಣದಲ್ಲಿ ಗುತ್ತಿಗೆದಾರ ನಿರ್ಲಕ್ಷ್ಯ ತೋರಿದ್ದಾರೆ. ಗುಣಮಟ್ಟ ಕಾಪಾಡಿಲ್ಲ. ಚಾವಣಿ ಕುಸಿದ ಪರಿಣಾಮ ವಿದ್ಯಾರ್ಥಿಗಳು ಕೊಠಡಿಗಳಲ್ಲಿ ಕುಳಿತುಕೊಳ್ಳಲು ಹೆದರುತ್ತಿದ್ದಾರೆ. ಸಿಮೆಂಟ್ ಪ್ಲಾಸ್ಟರ್ ತೆಳ್ಳನೆಯ ಪದರು ರೂಪದಲ್ಲಿ ಬಿರುಕು ಬಿಟ್ಟಿದ್ದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿದೆ. ಪಾಠ ಮಾಡುತ್ತಿದ್ದರೂ ವಿದ್ಯಾರ್ಥಿಗಳು ಚಾವಣಿಯತ್ತ ನೋಡುತ್ತಿರುತ್ತಾರೆ. ಆದ್ದರಿಂದ ಶಾಲಾ ಆವರಣದಲ್ಲಿ ಕೂರಿಸಲಾಗಿದೆ ಎಂದು ಶಿಕ್ಷಕರು ಹೇಳಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪೋಷಕರು ಮತ್ತು ಗ್ರಾಮಸ್ಥರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.