Chelur : ಚೇಳೂರು ತಾಲ್ಲೂಕಿನ ಪಾಳ್ಯಕೆರೆ (palyakere) ಗ್ರಾಮದ ಲಕ್ಷ್ಮಿವೆಂಕಟರಮಣಸ್ವಾಮಿ (lakshmi venkateshwara temple ) ದೇವಸ್ಥಾನದಲ್ಲಿ ಸೋಮವಾರ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು (inauguration) ವಿಜೃಂಭಣೆಯಿಂದ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡ ಗುಂಜೂರು ಆರ್. ಶ್ರೀನಿವಾಸರೆಡ್ಡಿ “ದೇವಸ್ಥಾನಗಳು ಮನುಷ್ಯರಿಗೆ ಶಾಂತಿ ಮತ್ತು ನೆಮ್ಮದಿ ನೀಡುವ ಧಾರ್ಮಿಕ ಕೇಂದ್ರಗಳು. ಗ್ರಾಮೀಣ ಭಾಗಗಳಲ್ಲಿನ ದೇಗುಲಗಳು ಸಮಾಜದಲ್ಲಿ ಶಾಂತಿ ನೆಮ್ಮದಿ ಸೌಹಾರ್ದದ ಪ್ರತೀಕವಾಗಿವೆ. ಹಿರಿಯರು ನಡೆಸಿಕೊಂಡು ಬರುತ್ತಿದ್ದ ಧಾರ್ಮಿಕ ಸಂಪ್ರದಾಯಗಳನ್ನು ನಿರ್ಲಕ್ಷಿಸಬಾರದು. ಧರ್ಮದ ದಾರಿಯಲ್ಲಿ ಪ್ರತಿಯೊಬ್ಬರೂ ನಡೆದರೆ ಲೋಕಕ್ಕೆ ಒಳ್ಳೆಯದಾಗುತ್ತದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.