Chikkaballapur: 2021ನೇ ವರ್ಷದ ರಾಜ್ಯಮಟ್ಟದ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಜಿಲ್ಲೆಯ ಆರ್.ಯು.ನವೀನ್‌ಕುಮಾರ್ ಮತ್ತು ವಿ.ಉಷಾ ಅವರಿಗೆ ಸೋಮವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರೌಢಶಾಲಾ ಶಿಕ್ಷಕರ ಸಂಘ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಡಿಡಿಪಿಐ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಡಿಡಿಪಿಐ ಜಯರಾಮರೆಡ್ಡಿ ಅವರು ಮಾತನಾಡಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕು, ಶಿಕ್ಷಕರು ಮಕ್ಕಳಿಗೆ ಆದರ್ಶಪ್ರಾಯರಾಗಬೇಕು ಎಂದು ತಿಳಿಸಿದರು.
ಪ್ರೌಢಶಾಲಾ ವಿಭಾಗದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರ್.ಯು.ನವೀನ್‌ಕುಮಾರ್ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಅವರ ಪಾತ್ರ ಹಿರಿದು. ವಿ.ಉಷಾ ಅವರೂ ಸಹ ಮಕ್ಕಳ ಕಲಿಕೆಯ ವಿಚಾರದಲ್ಲಿ ಪ್ರಮುಖವದ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಇಬ್ಬರೂ ಅತ್ಯುತ್ತಮ ಶಿಕ್ಷಕ ಪ‍್ರಶಸ್ತಿ ಪಡೆಯುವ ಮೂಲಕ ಜಿಲ್ಲೆಯ ಹಿರಿಮೆಯನ್ನು ಎತ್ತಿಹಿಡಿದ್ದಾರೆ ಎಂದು ಹೇಳಿದರು.
ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೆಂಪಣ್ಣ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.