Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ (77th Independence Day) ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಧ್ವಜಾರೋಹಣ ನೆರವೇರಿಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಬಳಿಯ ಈಶ ಯೋಗ ಕೇಂದ್ರ ದಲ್ಲಿ ಮಂಗಳವಾರ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯ ಎದುರು ಸದ್ಗುರು ಜಗ್ಗಿ ವಾಸುದೇವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಎಂ.ಜಿ ರಸ್ತೆಯ ಮಹಮ್ಮದಿಯ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಚಿಂತಾಮಣಿ
ಚಿಂತಾಮಣಿ ಮಂಗಳವಾರ ನಗರದ ಝಾನ್ಸಿರಾಣಿ ಕ್ರೀಡಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಚರಿಸಿದ ಸ್ವಾತಂತ್ರ್ಯ ದಿನೋತ್ಸವದಲ್ಲಿ ತಹಶೀಲ್ದಾರ್ ಸುದರ್ಶನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಶಿಡ್ಲಘಟ್ಟ
ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಲಾಗಿದ್ದ 77 ನೇ ಸ್ವಾತಂತ್ರ್ಯುತ್ಸವ ಸಮಾರಂಭದಲ್ಲಿ ರೈತ ಮಹಿಳೆ ಬೋದಗೂರು ಕಮಲಮ್ಮ ಅವರನ್ನು ಹಾಗೂ ಎಸ್ಸೆಸ್ಸೆಲ್ಸಿಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಬಾಗೇಪಲ್ಲಿ
ಬಾಗೇಪಲ್ಲಿ ಪಟ್ಟಣದ ಮಿನಿ ಕ್ರೀಡಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಪೌರಕಾರ್ಮಿಕರನ್ನು ಸನ್ಮಾನಿಸಿದರು.
ಚೇಳೂರು
ಚೇಳೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಮಂಗಳವಾರ ಸ್ವಾತಂತ್ರೋತ್ಸವ ಆಚರಿಸಲಾಯಿತು.