Chikkaballapur : ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Adichunchanagiri Nirmalanandanatha Swamiji) ಅವರ ನೇತೃತ್ವದಲ್ಲಿ ಮಂಗಳವಾರ ಅಮಾವಾಸ್ಯೆ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದ ಹೊರವಲಯದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.
ಪೂರ್ಣಕುಂಭ ಸ್ವಾಗತ ಸ್ವೀಕರಿಸಿದ ನಿರ್ಮಲಾನಂದನಾಥ ಸ್ವಾಮೀಜಿ ಅವರು ವೀರಾಂಜನೇಯಸ್ವಾಮಿಗೆ ತುಪ್ಪದ ದೀಪಾರತಿ, ವಿಶೇಷ ಅಭಿಷೇಕ, ಹೋಮ-ಹವನ ನೆರವೇರಿಸಿದರು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯದ ಆವರಣದಲ್ಲಿ ಸೇರಿದ್ದ ಭಕ್ತರು ದೇವರ ದರ್ಶನ ಪಡೆದು ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದರು.
ಪೂಜಾ ಕಾರ್ಯಕ್ರಮದ ನಂತರ ಮಾತನಾಡಿದ ನಿರ್ಮಲಾನಂದನಾಥ ಸ್ವಾಮೀಜಿ ಅವರು, ಜಗತ್ತು ವೇಗವಾಗಿ ಬೆಳೆಯುತ್ತಿದೆ. ಈ ಬೆಳವಣಿಗೆಗಳ ನಡುವೆಯೂ ನಮ್ಮ ಆಚರಣೆಗಳನ್ನು ಉಳಿಸಿ ಬೆಳೆಸಿಕೊಳ್ಳಬೇಕು. ನಾಗರಿಕರು ಸನ್ಮಾರ್ಗದಲ್ಲಿ ನಡೆಯಬೇಕು. ದೇವರ ಕಾರ್ಯಗಳು ಜನರಲ್ಲಿ ನೆಮ್ಮದಿಯ ಭಾವನೆಯನ್ನು ಮೂಡಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳಾನಂದನಾಥ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಶಿವರಾಮರೆಡ್ಡಿ ಪಾಲ್ಗೊಂಡಿದ್ದರು.